ಮರವಂತೆ: ಸೆಲ್ಫೀ ತೆಗೆಯಲು ಹೋಗಿ ಸಮುದ್ರ ಪಾಲಾದ ಯುವಕನ ಮೃತದೇಹ ಪತ್ತೆ – Vishwanews24
ಮರವಂತೆ: ಸೆಲ್ಫೀ ತೆಗೆಯಲು ಹೋಗಿ ಸಮುದ್ರಪಾಲಾದ ಯುವಕನ ಮೃತದೇಹ ಪತ್ತೆ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್ನಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ಸೆಲ್ಫೀ ತೆಗೆಯಲು ಹೋಗಿ ನೀರಪಾಲಾಗಿದ್ದ ಗದಗ ಮೂಲದ ಯುವಕನ ಮೃತದೇಹ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕು ಮೇವಂಡಿ ಗ್ರಾಮದ 21 ವರ್ಷ ಪ್ರಾಯದ ಪೀರ್ ನದಾಫ್ ಮೃತ ಯುವಕ. ಮೃತ ದೇಹವು ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆ ಬಳಿ ಪತ್ತೆಯಾಗಿದೆ.
ಮೂಡಬಿದಿರೆ: ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ತೆಗೆದುಕೊಂಡು ಯುವಕ ಪರಾರಿ – Vishwanews24
ಸಿರಾಜ್ ಲಾರಿಯನ್ನು ನಿಲ್ಲಿಸಿ ಬೀಚ್ ನಲ್ಲಿ ಇರುವ ಕಲ್ಲುಗಳ ಮೇಲೆ ನಿಂತು ಸಮುದ್ರಕ್ಕೆ ಬೆನ್ನು ಹಾಕಿ ಮೊಬೈಲ್ ಫೋನ್ ನಲ್ಲಿ ಸೆಲ್ಫೀ ತೆಗೆದುಕೊಳ್ಳುವಾಗ ಸಮುದ್ರದ ಅಲೆ ಅಪ್ಪಳಿಸಿದರ ಪರಿಣಾಮ ಫೀರ್ ಸಾಬನು ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ನಾಪತ್ತೆ ಆಗಿದ್ದು ಬುಧವಾರ ಬೆಳಿಗ್ಗೆ ಆತನ ಮೃತದೇಹ ಪತ್ತೆಯಾಗಿದೆ.
ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
