ಮುಂಬೈ: ಬಾಲಿವುಡ್‌ನ ಹಿರಿಯ ನಟ ದಿಲೀಪ್ ಕುಮಾರ್ (98) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ದೀರ್ಘಕಾಲ ಅನಾರೋಗ್ಯಕ್ಕೆ ಒಳಗಾಗಿದ್ದ ದಿಲೀಪ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಮುಂಬೈನ ಪಿ.ಡಿ. ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ನಿಧರರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಹಿಂದಿ ಸೇರಿದಂತೆ ಭಾರತೀಯ ಚಿತ್ರರಂಗಕ್ಕೆ ದಿಲೀಪ್ ಕುಮಾರ್ ನೀಡಿರುವ ಕೊಡುಗೆಗಳನ್ನು ಗಣ್ಯರು ಸ್ಮರಿಸಿದ್ದಾರೆ.
‘ದಿಲೀಪ್ ಕುಮಾರ್ ‘ಭಾರತೀಯ ಸಿನಿಮಾದ ದಿಗ್ಗಜ’ರಾಗಿ ನೆನಪಿನಲ್ಲಿ ಉಳಿಯುತ್ತಾರೆ. ಸರಿಸಾಟಿಯಿಲ್ಲದ ಪ್ರತಿಭೆಯ ನಟರಾಗಿ ಅನುಗ್ರಹಿತರಾಗಿದ್ದವರು. ಈ ಕಾರಣದಿಂದಾಗಿ ತಲೆಮಾರುಗಳ ಅಭಿಮಾನಿಗಳ ಬಳಗವನ್ನು ಹೊಂದಿದ್ದರು. ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಅಪಾರ ನಷ್ಟವಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬ, ಸ್ನೇಹಿತರು ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ’ ಎಂದು ಪ್ರಧಾನಿ ಮಂತ್ರಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ದಿಲೀಪ್ ಕುಮಾರ್ ‘ಬೆಳ್ಳಿ ಪರದೆಯ ನಿಜವಾದ ದಿಗ್ಗಜ’ ಎಂದು ಹೇಳಿದ್ದಾರೆ. ‘ಭಾರತೀಯ ಚಿತ್ರರಂಗಕ್ಕೆ ಶ್ರೇಷ್ಠ ನಾಯಕರೊಬ್ಬರ ನಷ್ಟವಾಗಿದೆ. ಅದ್ಭುತ ನಟನೆ ಹಾಗೂ ಅಪ್ರತಿಮ ಪಾತ್ರಗಳಿಂದ ತಲೆಮಾರಿಂದ ತಲೆಮಾರಿನ ಸಿನಿಮಾ ಪ್ರಿಯರನ್ನು ರಂಜಿಸಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ತಿಳಿಸಿದ್ದಾರೆ.
‘ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಸಾಧಾರಣ ಕೊಡುಗೆಗಾಗಿ ಮುಂದಿನ ಪೀಳಿಗೆಯು ಸದಾ ನೆನಪಿನಲ್ಲಿಟ್ಟುಕೊಳ್ಳಲಿದೆ. ದಿಲೀಪ್ ಕುಮಾರ್ ನಿಧನಕ್ಕೆ ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…