Featured

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸಾಧಕ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜರಗಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಾದ ಸಾನಿಧ್ಯ ಆಚಾರ್ಯ ಪೆರ್ಡೂರು, ಆರ್ಯ, ಮುತಹ್ಹರ್ ಮಲೈಕ, ವೈಷ್ಣವಿ ವಿಶ್ವನಾಥ್, ರಿತುಶ್ರೀ ಅವರನ್ನು ಸನ್ಮಾನಿಸಲಾಯಿತು. ಅದೇ ರೀತಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶೇಕ್ ವಹೀದ್ ದಾವೂದು, ಉಮೇಶ್ ಪೂಜಾರಿ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಭಟ್ ಅವರನ್ನು ಅಭಿನಂದಿಸಲಾಯಿತು.

ಮುಖ್ಯ ಅತಿಥಿಯಾಗಿ ಎನ್ ಎಚ್ ಆರ್ ಸಿ ಉಡುಪಿ‌ ಜಿಲ್ಲಾಧ್ಯಕ್ಷೆ ಸ್ಮಿತಾ ಸುಧೀರ್ ಮಾತನಾಡಿ, ಇಂದು ಮಕ್ಕಳಲ್ಲಿರುವ ಪ್ರತಿಭೆಗಳಿಗೆ ಎಲ್ಲ ಕಡೆ ಅವಕಾಶಗಳು ಸಿಗುತ್ತಿವೆ. ಅದನ್ನು ಮಕ್ಕಳು ಬಳಸಿಕೊಂಡು ಇನ್ನಷ್ಟು ಸಾಧನೆ ಮಾಡಬೇಕು ಎಂದು ತಿಳಿಸಿದರು.

ಕಾಪು ರಂಗತರಂಗ ಸಂಗೀತ ನಿರ್ದೇಶಕ‌ ಶರತ್ ಉಚ್ಚಿಲ, ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ಆಡಳಿತ ಕಚೇರಿ ವ್ಯವಸ್ಥಾಪಕಿ ವಿಜೇತ ಶೆಟ್ಟಿ ಮಾತನಾಡಿದರು. ಮಲಬಾರ್ ಗೋಲ್ಡ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಹರೀಶ್ ಎಮ್ ಜಿ, ಸಂದೀಫ್ ಸಫಲ್ಯ, ದಿವ್ಯ
ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಉಪಸ್ಥಿತರಿದ್ದರು. ಸಿಬ್ಬಂದಿ ವಿಘ್ನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

7 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

7 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

7 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

8 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

8 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

8 hours ago