Featured

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ._vishwanews24

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ಗೀತಾಂಜಲಿ ಶೋಪರ್ ಸಿಟಿ ಕಟ್ಟಡದಲ್ಲಿರುವ ಉಡುಪಿ ಶೋರೂಮ್ ನಲ್ಲಿ ಮಾರ್ಚ್ 06 ರಿಂದ ಮಾ.14 ರ ತನಕ ಆಯೋಜಿಸಲಾದ ಆರ್ಟಿಸ್ಟ್ರಿ ಬ್ರಾಂಡೆಡ್ ಜುವೆಲ್ಲರಿ ಶೋ ಕಾರ್ಯಕ್ರಮವು ಶನಿವಾರ ನಡೆಯಿತು.

ಮಹೇಶ್ ಬೆಟ್ಟಿನ್ ,ಆಶಾ ಅಮೀನ್ ಮಲ್ಪೆ,ಬಿಂದು ತಂಗಪ್ಪನ್ ಅವರು ಕ್ರಮವಾಗಿ ಎರಾ,ಡಿವೈನ್ ಚಿನ್ನಾಭರಣ, ವಜ್ರಾಭರಣಗಳನ್ನು ಅನಾವರಣಗೊಳಿಸಿ ಸಂಸ್ಥೆಗೆ ಶುಭ ಹಾರೈಸಿದರು.

ಉಡುಪಿ ಶೋರೂಮ್ ಮುಖ್ಯಸ್ಥ ಹಫೀಝ್ ರೆಹಮಾನ್ ಮಾತನಾಡಿ ಸುಕ್ಷ್ಮಾತಿ ಸುಕ್ಷ್ಮ ಕುಸುರಿ ಕೆಲಸಗಳಿಂದ ನಿರ್ಮಿತ ಚಿನ್ನಾಭರಣಗಳು ಕುಶಲಕರ್ಮಿಗಳ ಕೌಶಲ್ಯ ವನ್ನು ಪ್ರತಿಪಾದಿಸುತ್ತದೆ. ಪ್ರತಿ ಚಿನ್ನಾಭರಣವು ಅವರ ನೈಪುಣ್ಯತೆ ಮತ್ತು ಕುಶಲತೆಗೆ ಮೆರುಗು ನೀಡಿ ಈ ಪ್ರದರ್ಶನದ ವಿಷಯವಾದ ‘ಪ್ರತಿ ಅಭರಣದಲ್ಲೂ ಕಳೆಯಿದೆ’ ಎಂಬುದಕ್ಕೆ ಸಾಕ್ಷಿಯಾಗಿದೆ,
ಆರ್ಟಿಸ್ಟ್ರಿ ಬ್ರಾಂಡೆಡ್ ಜುವೆಲ್ಲರಿಯ ಸಬ್ ಬ್ರ್ಯಾಂಡ್ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ.
‘ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು ,’ ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ .’ಪ್ರಶಿಯಾ’ಲ್ಲಿ ರುಬಿ , ಎಮರಾಲ್ಡ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ,’ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ.’ ಏರ’ ಅನ್ನಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ ‘ ಹಾಯ್ ‘ ಯಲ್ಲಿ ಯುವತಿಯರ ಮನಸೆಳೆಯುವ ಮನಮೋಹಕ ಆಭರಣಗಳಿವೆ . ‘ ಸ್ಟಾರ್ಲೆಟ್’ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ . ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸಂಪೂರ್ಣ ಪಾರದರ್ಶಕ , ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಲಾಗಿದೆ.ಈ ಸಂದರ್ಭದಲ್ಲಿ ಗ್ರಾಹಕರಿಗೆ ಭಾರತದಾದ್ಯಂತ ಚಿನ್ನಾಭರಣಗಳಿಗೆ ಒನ್ ಇಂಡಿಯಾ ಒನ್ ಗೋಲ್ಡ್ ರೇಟ್ , ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್‌ ವಾಚ್‌ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು ಎಂದರು.

ಆಭರಣಗಳನ್ನು ಧರಿಸಿ ಉಡುಪಿಯ ರೂಪದರ್ಶಿಗಳಾದ ವೈಭವಿ ಭಂಡಾರಿ ಮಣಿಪಾಲ್,ಪ್ರಸಿದ್ದಿ ಸಾಲ್ಯಾನ್,ಅಕ್ಷತಾ ಕೆ ಶೆಟ್ಟಿ,ಅನುಷಾ ಅಮೀನ್, ಮೌಸಮಿ ಶೆಟ್ಟಿ ಕಾಪು,ರಕ್ಷಿತಾ ಶೆಟ್ಟಿ ವಕ್ವಾಡಿ ರಾಂಪ್ ವಾಕ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು ಮ್ಯಾನೇಜ್ಮೆಂಟ್ ಸದಸ್ಯರು, ಗ್ರಾಹಕರು,ಸಿಬ್ಬಂದಿ ಉಪಸ್ಥಿತರಿದ್ದರು. ವಿಜ್ಞೇಶ್ ಕಾರ್ಯಕ್ರಮ ನಿರೂಪಿಸಿ ರಾಘವೇಂದ್ರ ನಾಯಕ್ ನಿರೂಪಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago