Featured

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್  9860 ಕೋಟಿ ರೂ. ಹೂಡಿಕೆ ;  ಪೂರ್ಣ ಬೆಂಬಲ ವ್ಯಕ್ತಪಡಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ – Vishwanews24

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್  9860 ಕೋಟಿ ರೂ. ಹೂಡಿಕೆ ;  ಪೂರ್ಣ ಬೆಂಬಲ ವ್ಯಕ್ತಪಡಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್

ಬೆಂಗಳೂರು: ವಿಶ್ವದ ಅತಿದೊಡ್ಡ ಆಭರಣ ರೀಟೇಲ್ ಸರಪಳಿಗಳಲ್ಲಿ ಒಂದಾದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮುಂದಿನ ಮೂರು ವರ್ಷಗಳಲ್ಲಿ ಭಾರತದಲ್ಲಿ ೯,೮೬೦ ಕೋಟಿ ರೂ. ಹೂಡಿಕೆಯನ್ನು ಮಾಡಲಿದೆ. ಕೊಚ್ಚಿಯಲ್ಲಿ ಇತ್ತೀಚೆಗೆ ನಡೆದ ಹೂಡಿಕೆದಾರರ ದುಂಡು ಮೇಜಿನ ಸಭೆಯಲ್ಲಿ ಮಲಬಾರ್ ಗ್ರೂಪ್ ಅಧ್ಯಕ್ಷ ಎಂ.ಪಿ. ಅಹಮ್ಮದ್ ಮತ್ತು ಮಲಬಾರ್ ಗೋಲ್ಡ್ & ಡೈಮಂಡ್ಸ್ ಇಂಡಿಯಾ ಆಪರೇಷನ್ಸ್ ವ್ಯವಸ್ಥಾಪಕ ನಿರ್ದೇಶಕ ಒ. ಅಶರ್ ಜಂಟಿಯಾಗಿ ಇದನ್ನು ಘೋಷಿಸಿದರು. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ರಾಜ್ಯ ಕೈಗಾರಿಕೆ ಸಚಿವ ಪಿ. ರಾಜೀವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಲಬಾರ್ ಗೋಲ್ಡ್ & ಡೈಮಂಡ್ಸ್ ಖಜಾನೆ ಮತ್ತು ಬುಲಿಯನ್ ಮುಖ್ಯಸ್ಥ ದಿಲೀಪ್ ನಾರಾಯಣ್ ಅವರೂ ಸಮಾವೇಶದಲ್ಲಿ ಭಾಗವಹಿಸಿದ್ದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ `ಮೇಕ್ ಇನ್ ಇಂಡಿಯಾ, ಮಾರ್ಕೆಟ್ ಟು ದಿ ವರ್ಲ್ಡ್’ ಉಪಕ್ರಮವನ್ನು ವೃದ್ಧಿಸಲು ತನ್ನ ಹೂಡಿಕೆಗಳನ್ನು ದ್ವಿಗುಣಗೊಳಿಸುತ್ತಿದೆ. ೨೦೨೫ರ ವೇಳೆಗೆ ೫೦೦ ಹೊಸ ಶೋರೂಂಗಳನ್ನು ತೆರೆಯಲು ಸಂಸ್ಥೆಯು ಯೋಜಿಸುತ್ತಿದೆ. ಇದರಿಂದ ಸರಿಸುಮಾರು ೧೧,೦೦೦ ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ರಾಷ್ಟಿçÃಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಹೂಡಿಕೆದಾರರ ದುಂಡು ಮೇಜಿನ ಪರಿಷತ್ತನ್ನು ಆಯೋಜಿಸಲಾಗಿತ್ತು. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ `ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಉತ್ತೇಜಿಸುವಲ್ಲಿ ಮತ್ತು ಅದರ ವಿಸ್ತರಣಾ ಯೋಜನೆಗಳ ಮೂಲಕ ಸಾಮೂಹಿಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕಂಪನಿಯು ಅನುಕರಣೀಯ ಪ್ರಯತ್ನಗಳನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಶ್ಲಾಘಿಸಿದರು. ಈ ನಿಟ್ಟಿನಲ್ಲಿ ಕಂಪನಿಯ ನವೀನ ಉಪಕ್ರಮಗಳಿಗೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವನ್ನು ಅವರು ವ್ಯಕ್ತಪಡಿಸಿದರು.

ಪ್ರಸ್ತುತ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಹತ್ತು ದೇಶಗಳಲ್ಲಿ ೨೮೦ಕ್ಕೂ ಹೆಚ್ಚು ಶೋರೂಮ್ಗಳನ್ನು, ಐದು ರಾಷ್ಟçಗಳಲ್ಲಿ ೧೪ ಉತ್ಪಾದನಾ ಘಟಕಗಳನ್ನು ಹೊಂದಿದೆ. ಇದು ೪,೦೯೨ ಹೂಡಿಕೆದಾರರನ್ನು ಹೊಂದಿದೆ ಮತ್ತು ೧೪,೧೬೯ ನಿರ್ವಹಣಾ ಸಿಬ್ಬಂದಿಯನ್ನು ನೇಮಿಸಿಕೊಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿಯು ಒಟ್ಟು ೪೫,೦೦೦ ಕೋಟಿ ರೂ.ಗಳ ವ್ಯವಹಾರ ನಡೆಸುವ ಗುರಿ ಹೊಂದಿದೆ. ಕಂಪನಿಯು ತನ್ನ ವ್ಯಾಪಾರ ಮಾದರಿಯನ್ನು ಪರಿವರ್ತಿಸಲು ಮೈಕ್ರೋಸಾಫ್ಟ್, ಐಬಿಎಂ, ಅಕ್ಸೆಂಚರ್, ಇ&ವೈ, ಡೆಲೈಟ್ ಮುಂತಾದ ಜಾಗತಿಕ ತಂತ್ರಜ್ಞಾನದ ದೈತ್ಯರ ಸೇವೆಗಳನ್ನು ಬಳಸಿಕೊಳ್ಳುತ್ತಿದೆ.

ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಪರಿಸರ ಸಾಮಾಜಿಕ ಮತ್ತು ಆಡಳಿತ (ಇಎಸ್‌ಜಿ) ಮಾನದಂಡಗಳಿಗೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಸ್ಥಿರವಾಗಿ ಅಂಟಿಕೊಳ್ಳುತ್ತದೆ. ಸಾಮಾಜಿಕವಾಗಿ ಜವಾಬ್ದಾರಿಯುತ ಕಂಪನಿಯಾಗಿದ್ದು, ಸಾಮಾಜಿಕ ಉದ್ದೇಶಗಳಿಗಾಗಿ ತನ್ನ ಲಾಭದ ೫% ಅನ್ನು ಮೀಸಲಿಡುತ್ತಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

8 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

8 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

8 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

9 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago