ಕೊಚ್ಚಿ, ಸೆ.17: ಮಲಯಾಳಂನ ಖ್ಯಾತ ನಟ ಕ್ಯಾಪ್ಟನ್ ರಾಜು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ನಟ ಕೊಚ್ಚಿಯಲ್ಲಿ ತನ್ನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಲವೇ ತಿಂಗಳ ಹಿಂದೆ ಅಮೆರಿಕಕ್ಕೆ ವಿಮಾನದಲ್ಲಿ ತೆರಳುತ್ತಿದ್ದ ವೇಳೆಯೇ ರಾಜು ಅವರಿಗೆ ಪಾರ್ಶ್ವವಾಯು ಬಾಧಿಸಿತ್ತು. ರಾಜು ಅವರ ಆರೋಗ್ಯ ಪರಿಸ್ಥಿತಿಯನ್ನು ಗಮನಿಸಿದ ವಿಮಾನದ ಸಿಬ್ಬಂದಿಗಳು ವಿಮಾನದ ದಿಕ್ಕನ್ನು ಬದಲಿಸಿ ಮಸ್ಕತ್‌ನಲ್ಲಿ ಇಳಿಸಿದ್ದರು. ಕುಟುಂಬದವರ ಕೋರಿಕೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ನಟನನ್ನು ಮಸ್ಕತ್‌ನಿಂದ ಕೊಚ್ಚಿಗೆ ಸ್ಥಳಾಂತರಿಸಲಾಗಿತ್ತು.
ಕ್ಯಾಪ್ಟನ್ ರಾಜು 1981ರಲ್ಲಿ ಭಾರತೀಯ ಸೇನೆಯನ್ನು ತ್ಯಜಿಸಿ ನಟನಾ ವೃತ್ತಿಯನ್ನು ಆರಂಭಿಸಿದ್ದರು. ಇವರು 500ಕ್ಕೂ ಚಿತ್ರಗಳಲ್ಲಿ ನಟಿಸಿದ್ದು ,2017ರಲ್ಲಿ ‘ಮಾಸ್ಟರ್‌ಪೀಸ್’ ಎಂಬ ಚಿತ್ರದಲ್ಲಿ ಕೊನೆಯ ಬಾರಿ ನಟಿಸಿದ್ದರು.
ಮೃತ ನಟ ರಾಜು ಅವರು ಪತ್ನಿ ಪ್ರಮೀಳಾ ಹಾಗೂ ಪುತ್ರ ರವಿ ಅವರನ್ನು ಅಗಲಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…