ಲಿಲಾಂಗ್ವೆ(ಮಲಾವಿ): ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು ಸಿಎನ್ ಎನ್ ವರದಿ ಮಾಡಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಉತ್ತರ ಲಿಲಾಂಗ್ವೆನಿಂದ ಸುಮಾರು 380 ಕಿಲೋ ಮೀಟರ್ ದೂರದಲ್ಲಿರುವ ಮುಝುಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್ ಆಗಬೇಕಿತ್ತು ಎಂದು ತಿಳಿಸಿದ್ದಾರೆ.
ವಿಮಾನ ರಾಡಾರ್ ಸಂಪರ್ಕಕ್ಕೆ ಸಿಗದೇ ಇದ್ದು, ನಾಪತ್ತೆಯಾಗಿರುವ ವಿಮಾನ ಪತ್ತೆಗಾಗಿ ಎಲ್ಲಾ ರೀತಿಯ ಶ್ರಮ ವಹಿಸಲಾಗುತ್ತಿದೆ ಎಂದು ಅಧ್ಯಕ್ಷರ ಕಚೇರಿಯ ಪ್ರಕಟನೆ ವಿವರಿಸಿದೆ. ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಪ್ರಯಾಣಿಕರ ಶೋಧಕ್ಕಾಗಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಏಜೆನ್ಸಿಯನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…