ಮಲೆಯಾಳಂನ ಖ್ಯಾತ ನಟ ನಿರ್ದೇಶಕ ಪ್ರತಾಪ್ ಪೋಥೆನ್ ನಿಧನ – Vishwanews24
ಮಲೆಯಾಳಂನ ಖ್ಯಾತ ನಟ ನಿರ್ದೇಶಕ ಪ್ರತಾಪ್ ಪೋಥೆನ್ ಚೆನ್ನೈ ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ – Vishwanews24
ಚೆನ್ನೈ : ಮಲೆಯಾಳಂನ ಖ್ಯಾತ ಪೋಷಕ ನಟ ನಿರ್ದೇಶಕ ಪ್ರತಾಪ್ ಪೋಥೆನ್ ಚೆನ್ನೈ ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪ್ರತಾಪ್ ನಿಧನಕ್ಕೆ ಅನಾರೋಗ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಹಲವು ದಿನಗಳಿಂದ ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ಒಂಟಿಯಾಗಿ ವಾಸಿಸುತ್ತಿದ್ದರಿಂದ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಯಬೇಕಿದೆ. ಹಿರಿಯ ಕಲಾವಿದರ ನಿಧನಕ್ಕೆ ತಮಿಳು ಮತ್ತು ಮಲಯಾಳಂ ಸಿನಿಮಾ ರಂಗ ಕಂಬನಿ ಮಿಡಿದಿದೆ. ಅನೇಕ ಅಭಿಮಾನಿಗಳು ಕೂಡ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ.
100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ ಕರೆ ತಂದರು. 1980ರಲ್ಲಿ ಲೋರಿ ಮತ್ತು ಚಮರಮ್ ಸಿನಿಮಾದಲ್ಲಿ ಪ್ರತಾಪ್ ಹೆಚ್ಚಿನ ಗಮನ ಸೆಳೆದ್ದರು.
ಬ್ರಿಟನ್ ಪ್ರಧಾನಿಯಾಗುವ ಆಕಾಂಕ್ಷೆ ಮತ್ತಷ್ಟು ಭದ್ರ ; ಎರಡನೇ ಸುತ್ತಿನಲ್ಲೂ ರಿಷಿ ಸುನಕ್ ಗೆಲುವು – Vishwanews24
