Featured

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ..

ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ

ಕೌಲಾಲಂಪುರ್: 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್ (ಸುಮಾರು 23.95 ಕೋಟಿ ಭಾರತೀಯ ರೂಪಾಯಿಗಳು) ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ ಹೇರುವ ಮೂಲಕ ಮಕ್ಕಳ ಸೋಷಿಯಲ್ ಮೀಡಿಯಾ ವ್ಯಸನವನ್ನು ಕಡಿಮೆ ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿಯಮಾನುಸಾರ 16 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್ ಹಾಗೂ ಯೂಟ್ಯೂಬ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾಗಳಲ್ಲಿ ಖಾತೆ ತೆರೆಯಲು ಅವಕಾಶವಿಲ್ಲ.

ಸೋಶಿಯಲ್ ಮೀಡಿಯಾ ಕಂಪನಿಗಳು ಬಳಕೆದಾರರ ವಯಸ್ಸು ಪರಿಶೀಲಿಸುವ ವ್ಯವಸ್ಥೆ ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.

ಮಕ್ಕಳನ್ನು ಹಾನಿಕಾರಕ ವಿಷಯಗಳು, ಸೈಬರ್ ಬುಲ್ಲಿಂಗ್ ಹಾಗೂ ಅತಿಯಾದ ಸೋಶಿಯಲ್ ಮೀಡಿಯಾ ಬಳಕೆಯಿಂದ ರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಈ ನಿಯಮ ಮಕ್ಕಳಿಗೆ ಇಂಟರ್‌ನೆಟ್ ಅಥವಾ ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ತಡೆಯುವುದಿಲ್ಲ ಎಂದು ಮಲೇಷ್ಯಾ ತಿಳಿಸಿದೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

7 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

7 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

8 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

9 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

12 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

12 hours ago