ಉಡುಪಿ: ಮಲ್ಪೆಯಲ್ಲಿ ಮಾ. 18 ರಂದು ದಲಿತ ಮಹಿಳೆಗೆ ಹಲ್ಲೆ ನಡೆಸಿದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಮಲ್ಪೆ ಠಾಣೆಯ ಇಬ್ಬರು ಬೀಟ್ ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಅಮಾನತುಗೊಂಡವರು ಹೆಡ್ ಕಾನ್ಸ್ಟೇಬಲ್ ಸುರೇಶ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ನಾಗರಾಜ್ ಮಲ್ಪೆಯಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ವಿಜಯನಗರದ ಮಹಿಳೆಯೋರ್ವರ ಮೇಲೆ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದ್ದು, ಗುರುವಾರ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿದ ಸಂಬಂಧ ಇಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಎಂಬುವರನ್ನು ಬಂಧಿಸಲಾಗಿರುತ್ತದೆ ಮತ್ತು ತನಿಖೆ ಮುಂದುವರೆದಿರುತ್ತದೆ.
ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿರುತ್ತದೆ. ಸದರಿ ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಸಮಗ್ರ ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬುಧವಾರ ಮೀನು ಮಾರಾಟ ಮಾಡುವ ಶ್ರೀಮತಿ ಲಕ್ಷ್ಮೀ, ಶಿಲ್ಪ, ಆರಾಧನ ಬೋಟಿನ ಸುಂದರ್ ಎಂಬವರನ್ನು ಬಂಧಿಸಲಾಗಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ ಬಂಧಿತರಾದವರ ಸಂಖ್ಯೆ ಐದಕ್ಕೆ ಏರಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…