Featured

ಮಲ್ಪೆ: ಅಕ್ರಮ ಮರಳು ಸಾಗಾಟ; ವಾಹನ ಸಮೇತ ಆರೋಪಿ ಪೊಲೀಸ್ ವಶಕ್ಕೆ – vishwanews24

ಮಲ್ಪೆ: ಅಕ್ರಮ ಮರಳು ಸಾಗಾಟ; ವಾಹನ ಸಮೇತ ಆರೋಪಿ ಪೊಲೀಸ್ ವಶಕ್ಕೆ

ಮಲ್ಪೆ: ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳನ್ನು ವಾಹನ ಸಮೇತ ಮಲ್ಪೆ ಪೊಲೀಸರು ಹಿಡಿದು ಮರಳು ಹಾಗೂ ವಾಹನ ಚಾಲಕನನ್ನು ವಶಪಡಿಸಿಕೊಂಡಿರುವ ಘಟನೆ ಅ. 2ರಂದು ನಡೆದಿದೆ.

ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಸಂತೆಕಟ್ಟೆ ಕಡೆಗೆ ಅನುಮಾನಸ್ಪದವಾಗಿ ಟಿಪ್ಪರ್‌ ಅನ್ನು ಚಲಾಯಿಸಿಕೊಂಡು ಬರುವುದನ್ನು ಗಮನಿಸಿದ ಪೊಲೀಸರು ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ವಾಹನವನ್ನು ತಡೆದು ನಿಲ್ಲಿಸಿದ್ದರು.
ವಾಹನವನ್ನು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಮರಳನ್ನು ಅಕ್ರಮ ಸಾಗಾಟ ಮಾಡುತ್ತಿರುವ ಪತ್ತೆಯಾಗಿದೆ. ವಾಹನ ಚಾಲಕ ಪ್ರಭು ಡಿ. ಸನಗಿನ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಮರಳನ್ನು ಮೂಲ್ಕಿಯ ಸಂಕಲಕರೆ ಪಟ್ಟೆಕ್ರಾಸ್‌ ಎಂಬಲ್ಲಿರುವ ಸಿನೋಜ್‌ ಅವರು ದಕ್ಕೆಯಿಂದ ತಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

7 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

7 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

7 hours ago