ಮಲ್ಪೆ: ಆಜಾನ್ ಶಬ್ದ ನಿಯಂತ್ರಣಕ್ಕಾಗಿ ಮೈಕ್‌ಗಳಿಗೆ ಅಳವಡಿಸಲು ಡಿವೈಸ್ ಅಭಿವೃದ್ಧಿಪಡಿಸಲಾಗಿದ್ದು, ಹೀಗಾಗಿ ಶಬ್ದವನ್ನು ನಿಯಂತ್ರಣದಲ್ಲಿ ಇಡಹುದಾಗಿದೆ ಎಂದು ಬೆಂಗಳೂರು ಸಿಟಿ ಜಾಮಿಯಾ ಮಸೀದಿಯ ಖತೀಬ್ ಮೌಲಾನ ಡಾ| ಮೊಹಮ್ಮದ್ ಮಕ್ಸೂದ್ ಇಮ್ರಾನ್ ಸಹಾಬ್ ರಶಾದಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಶಬ್ದ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆ ನೀಡುವುದು ಸರಿಯಲ್ಲ ಬೇಕೆಂದರೆ ದೇವಸ್ಥಾನ, ಚರ್ಚ್, ಗುರುದ್ವಾರಗಳಲ್ಲೂ ಅಳವಡಿಸಿಕೊಳ್ಳಬಹುದಾಗಿದೆ. ಈ ಡಿವೈಸ್ ಆದಷ್ಟು ಬೇಗ ರಾಜ್ಯದ ಎಲ್ಲ ಮಸೀದಿಗಳಲ್ಲೂ ಅಳವಡಿಕೆ ಮಾಡಲಾಗುವುದು ಹಾಗೂ ಪ್ರತಿಯೊಂದು ಜಿಲ್ಲೆಗೂ ತೆರಳಿ ಈ ಬಗ್ಗೆ ಅರಿವು ಮೂಡಿಸಿ ಅಳವಡಿಸಿಕೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಆಜಾನ್‌ಗೆ ಸಂಬಂಧಿಸಿ ಶ್ರೀರಾಮ ಸೇನೆಯವರು ಮಸೀದಿಯ ಮುಂದೆ ಹನುಮಾನ್ ಚಾಲೀಸಾ ಪಠಿಸಿದರೆ ಯಾರೂ ವಿರೋಧ ಮಾಡಬಾರದು. ಅವರಿಗೆ ನೀರು ಬೇಕಾದರೆ ನೀರು, ಜ್ಯೂಸ್ ಬೇಕಾದರೆ ಜ್ಯೂಸ್ ಕೊಡಿ. ಆ ಮೂಲಕ ನಾವು ಸೌಹಾರ್ದದ ಸಂದೇಶವನ್ನು ನೀಡಬೇಕು ಎಂದರು. ಈ ಸಂದರ್ಭ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಯಾಹ್ಯ ನಕ್ವಾ ಹಾಜರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…