Featured

ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರಿಂದ ದಲಿತ ಯುವಕನ ಮೇಲೆ ಹಲ್ಲೆ : ಮಹಿಳೆ ಸಹಿತ ನಾಲ್ವರ ಮೇಲೆ ಎಫ್ಐಆರ್ – vishwanews24

ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರಿಂದ ದಲಿತ ಯುವಕನ ಮೇಲೆ ಹಲ್ಲೆ : ಮಹಿಳೆ ಸಹಿತ ನಾಲ್ವರ ಮೇಲೆ ಎಫ್ಐಆರ್

ಮಲ್ಪೆ  : ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಅಂಬಲಪಾಡಿಯ ಖಾಸಗಿ ಹೋಟೇಲ್ ನಲ್ಲಿ ರವಿವಾರ ನಡೆದಿದೆ.

ಕರವೇ ಸದಸ್ಯರಾದ ಪ್ರಭಾಕರ, ಕುಶಾಲ್, ಜಯ, ಅಶ್ವಿನಿ ಎಂಬವರು ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ಯುವಕನನ್ನು ಮೂಡುಬೆಳ್ಳೆ ನಿವಾಸಿ ಶಶಿಕುಮಾರ್‌ (34) ಎಂದು ಗುರುತಿಸಲಾಗಿದೆ.

 

ದಿನಾಂಕ. 04.02.2024 ರ ರವಿವಾರ ಸಂಜೆ 4 ಗಂಟೆಗೆ ಖಾಸಗಿ ಹೋಟೇಲ್ ನಲ್ಲಿ ಕರವೇ ಸಭೆಯನ್ನು ಕರವೇ ಸದಸ್ಯ ಪ್ರಭಾಕರ ಪೂಜಾರಿ ಕರೆದಿದ್ದು ಈ ನಡುವೆ ನಿಕಟ ಪೂರ್ವ ಅಧ್ಯಕ್ಷ ಅನ್ಸಾರ್ ಅಹಮದ್ ಪ್ರಭಾಕರ ರವರಲ್ಲಿ ಪ್ರಸ್ತುತ ಅಧ್ಯಕ್ಷರೇ ಇಲ್ಲದೇ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೇ ಹೇಗೆ ಮೀಟಿಂಗ್ ಎಂದು ಕೇಳಿದಾಗ ಅವರೊಳಗೆ ವಾದ-ವಿವಾದ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಆರೋಪಿಗಳಾದ ಪ್ರಭಾಕರ, ಕುಶಾಲ್, ಜಯ, ಅಶ್ವಿನಿ ಎಂಬವರು ದಲಿತ ಯುವಕನಾದ ಶಶಿಕುಮಾರ್ ಗೆ ಅವಾಚ್ಯ ಶಬ್ದಗಳಿಂದ ಬೈದಿರುವುದು ಮಾತ್ರವಲ್ಲದೇ ಹಲ್ಲೆ ನಡೆಸಿರುತ್ತಾರೆ.

ಈ ಕುರಿತು ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 18/2024 ಕಲಂ: 323, 504 , 506 ಜೊತೆಗೆ 34 ಐಪಿಸಿ & 3(1)(r), 3(1)(s), 3(2)(v-a) SC/ST ACT ರಂತೆ ಪ್ರಕರಣ ದಾಖಲಾಗಿರುತ್ತದೆ.

ಕರವೇ ಪ್ರಭಾಕರ ಪೂಜಾರಿ ವಿರುದ್ಧ ಕಳೆದ 1 ತಿಂಗಳ ಹಿಂದೆ ದಲಿತ ಮಹಿಳೆಗೆ ಜೀವಬೆದರಿಕೆಯೊಡ್ದಿದ ಆರೋಪದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

4 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

6 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

7 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

7 hours ago