ಮಲ್ಪೆ: ತೆಂಕನಿಡಿಯೂರು ಗ್ರಾ.ಪಂ.ಅಧ್ಯಕ್ಷೆ ಶೋಭಾಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ 8 ಮಂದಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ.
ಜೂ.28ರಂದು ಪಿಡಿಒ ದಯಾನಂದ ಅವರು ಎಸ್ಎಲ್ಆರ್ಎಂ ಘಟಕದಲ್ಲಿ ನೀರಿನ ಹರಿವಿಗೆ ಅಡಚಣೆಯಾಗಿರುವ ಕಾರಣಕ್ಕೆ ಸ್ಥಳಕ್ಕೆ ಬರುವಂತೆ ಹೇಳಿದ ಹಿನ್ನೆಲೆಯಲ್ಲಿ ಶೋಭಾ ಅವರು ಸಂಜೆ 5 ಗಂಟೆಗೆ ತೆಂಕನಿಡಿಯೂರು ಶ್ಮಶಾನದ ಬಳಿಯ ಎಸ್ಎಲ್ ಆರ್ಎಂ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಬಂದಿದ್ದರು.
ಆಗ ಆರೋಪಿಗಳಾದ ಶರತ್ ಬೈಲಕೆರೆ, ಕಿರಣ ಪಿಂಟೋ, ವಿಜಯಪ್ರಕಾಶ್, ಗಾಯತ್ರಿ, ಪುಷ್ಪಾ, ಶಾಲಿನಿ, ಕೃಷ್ಣ ಶೆಟ್ಟಿ ಹಾಗೂ ಇತರರು ಸೇರಿ ಏಕವಚನದಲ್ಲಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ತನ್ನನ್ನು ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಬೇಕೆಂಬ ಉದ್ದೇಶವಿಟ್ಟುಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಶೋಭಾ ಅವರು ಮಲ್ಪೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…