ಉಡುಪಿ :ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ದಗೊಂಡಿದ್ದು,ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲಾ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಅರಬ್ಬೀ ಸಮುದ್ರದಲ್ಲಿ ತೀವ್ರ ತರದ ಗಾಳಿ ಬೀಸುತ್ತಿದ್ದು, ಈ ಹಿನ್ನಲೆಯಲ್ಲಿ ಜಲಕ್ರಿಡೆ, ಬೋಟ್ ಚಟುವಟಿಕೆ, ಫ್ಲೋಟಿಂಗ್ ಬ್ರಿಡ್ಜ್, ಸೈಂಟ್ ಮೇರಿಸ್ ದ್ವೀಪ ಪ್ರಯಾಣಕ್ಕೆ ಮುಂದಿನ ಆದೇಶದವರೆಗೆ ನಿರ್ಭಂದ ಹೇರಲಾಗಿದೆ.
ರಜೆಯ ಮಜಾ ಅನುಭವಿಸಲು ದೂರದ ಪ್ರದೇಶಗಳಿಂದ ಮಲ್ಪೆ ಗೆ ಆಗಮಿಸುತ್ತಿರುವ ಪ್ರವಾಸಿಗರಿಗೆ ಇದರಿಂದ ನಿರಾಸೆಯಾದರೂ ಜಿಲ್ಲಾಡಳಿತವು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ.ಇದಲ್ಲದೆ ಪ್ರವಾಸಿಗರಿಗೆ ಧ್ವನಿವರ್ದಕದ ಮೂಲಕ ನೀರಿಗೆ ಇಳಿಯದಂತೆ ಎಚ್ಚರಿಕೆನೀಡಲಾಗುತ್ತಿದ್ದು , ಎಲ್ಲಾ ಪ್ರವಾಸಿ ಬೋಟ್ ಗಳ ಸಂಚಾರ ಸ್ಥಗಿತಗೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…