Featured

ಮಲ್ಪೆ : ಚಲಿಸುತ್ತಿರುವ ಬೋಟ್ ಗಳಲ್ಲಿ ಸಾವಿರಾರು ಗಾಯಕರಿಂದ ಕೋಟಿ ಕಂಠ ಗಾಯನ – Vishwanews24

ಮಲ್ಪೆ : ಸಾವಿರಾರು ಗಾಯಕರಿಂದ ಚಲಿಸುತ್ತಿರುವ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನ

ಉಡುಪಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಕೋಟಿ ಕಂಠ ಗಾಯನ ಎಂಬ ಮಹಾಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯೂ ತನ್ನ ಕಾಣಿಕೆಯನ್ನು ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಮಂಗಳೂರು ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ವತಿಯಿಂದ, ಉಡುಪಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅರಬ್ಬಿ ಸಮುದ್ರದ ಮಧ್ಯದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ದೊರಕಿತು.

ಮಲ್ಪೆ ಸೀ ವಾಕ್ ಬಳಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಕೋಟಿ ಕಂಠ ಗಾಯನದ ಅಂಗವಾಗಿ ಬೋಟ್‌ಗಳನ್ನು ಶೃಂಗಾರಗೊಳಿಸಲಾಗಿತ್ತು. 100 ಕ್ಕೂ ಅಧಿಕ ಪರ್ಸಿಯನ್ ಬೋಟ್‌ಗಳು ಸೀ ವಾಕ್‌ನಿಂದ ಹೊರಟು ಸಮುದ್ರ ಮಧ್ಯೆ ಸಾಗಿಬಂದವು. ಪ್ರತಿಯೊಬ್ಬರು ಕನ್ನಡ ಬಾವುಟವನ್ನು ಬೀಸುತ್ತಿದ್ದು, ಸಮುದ್ರ ಮಧ್ಯೆ ಕನ್ನಡದ ಕಂಪು ಮೊಳಗಿತು.

ಕನ್ನಡ ಬಾವುಟ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎಂ. ಕೂರ್ಮರಾವ್.

ಯಶ್‌ಪಾಲ್ ಎ. ಸುವರ್ಣ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಾಧು ಸಾಲಿಯಾನ್, ಸುಭಾಸ್, ಪರ್ಸಿಯನ್ ಸಂಘದ ನಾಗರಾಜ ಸುವರ್ಣ, ನಟಿ ಮಾನಸಿ ಸುಧೀರ್, ಗಣೇಶ್ ಉಪಸ್ಥಿತರಿದ್ದರು.

ಕನ್ನಡ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೋಟಿಗೂ ಹೆಚ್ಚು ಮಂದಿ ಕನ್ನಡ ಕುರಿತ ಗೀತೆಗಳನ್ನು ಹಾಡುವ ಕೋಟಿ ಕಂಠ ಗಾಯನಕ್ಕೆ ಉಡುಪಿಯಿಂದ 5 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಈ ಹಿಂದೆಯೇ ತಿಳಿಸಿದ್ದರು. 5 ಲಕ್ಷ ಜನರು ಸೇರುವಷ್ಟು ಸಿದ್ಧತೆ ಮಾಡಿಕೊಳ್ಳಬೇಕು. ಒಂದು ಪ್ರದೇಶದಲ್ಲಿ ಕನಿಷ್ಟ 100 ಮಂದಿ ಹಾಡಬೇಕು. ಜಿಲ್ಲೆಯ ಸಹಕಾರಿ ಸಂಘಗಳು ಮತ್ತು ಸಿಬ್ಬಂದಿ, ಕಾರ್ಖಾನೆ ಕಾರ್ಮಿಕರು, ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ, ನಗರ ಸಂಸ್ಥೆಗಳಲ್ಲಿ ಸಿಬ್ಬಂದಿ ಭಾಗವಹಿಸಬೇಕು ಎಂದು ಸಚಿವರು ತಿಳಿಸಿದ್ದರು

ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ.. ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago