ಉಡುಪಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಕೋಟಿ ಕಂಠ ಗಾಯನ ಎಂಬ ಮಹಾಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯೂ ತನ್ನ ಕಾಣಿಕೆಯನ್ನು ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ವತಿಯಿಂದ, ಉಡುಪಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅರಬ್ಬಿ ಸಮುದ್ರದ ಮಧ್ಯದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ದೊರಕಿತು.
ಮಲ್ಪೆ ಸೀ ವಾಕ್ ಬಳಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಕೋಟಿ ಕಂಠ ಗಾಯನದ ಅಂಗವಾಗಿ ಬೋಟ್‌ಗಳನ್ನು ಶೃಂಗಾರಗೊಳಿಸಲಾಗಿತ್ತು. 100 ಕ್ಕೂ ಅಧಿಕ ಪರ್ಸಿಯನ್ ಬೋಟ್‌ಗಳು ಸೀ ವಾಕ್‌ನಿಂದ ಹೊರಟು ಸಮುದ್ರ ಮಧ್ಯೆ ಸಾಗಿಬಂದವು. ಪ್ರತಿಯೊಬ್ಬರು ಕನ್ನಡ ಬಾವುಟವನ್ನು ಬೀಸುತ್ತಿದ್ದು, ಸಮುದ್ರ ಮಧ್ಯೆ ಕನ್ನಡದ ಕಂಪು ಮೊಳಗಿತು.
ಕನ್ನಡ ಬಾವುಟ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎಂ. ಕೂರ್ಮರಾವ್.
ಯಶ್‌ಪಾಲ್ ಎ. ಸುವರ್ಣ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಾಧು ಸಾಲಿಯಾನ್, ಸುಭಾಸ್, ಪರ್ಸಿಯನ್ ಸಂಘದ ನಾಗರಾಜ ಸುವರ್ಣ, ನಟಿ ಮಾನಸಿ ಸುಧೀರ್, ಗಣೇಶ್ ಉಪಸ್ಥಿತರಿದ್ದರು.
ಕನ್ನಡ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೋಟಿಗೂ ಹೆಚ್ಚು ಮಂದಿ ಕನ್ನಡ ಕುರಿತ ಗೀತೆಗಳನ್ನು ಹಾಡುವ ಕೋಟಿ ಕಂಠ ಗಾಯನಕ್ಕೆ ಉಡುಪಿಯಿಂದ 5 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಈ ಹಿಂದೆಯೇ ತಿಳಿಸಿದ್ದರು. 5 ಲಕ್ಷ ಜನರು ಸೇರುವಷ್ಟು ಸಿದ್ಧತೆ ಮಾಡಿಕೊಳ್ಳಬೇಕು. ಒಂದು ಪ್ರದೇಶದಲ್ಲಿ ಕನಿಷ್ಟ 100 ಮಂದಿ ಹಾಡಬೇಕು. ಜಿಲ್ಲೆಯ ಸಹಕಾರಿ ಸಂಘಗಳು ಮತ್ತು ಸಿಬ್ಬಂದಿ, ಕಾರ್ಖಾನೆ ಕಾರ್ಮಿಕರು, ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ, ನಗರ ಸಂಸ್ಥೆಗಳಲ್ಲಿ ಸಿಬ್ಬಂದಿ ಭಾಗವಹಿಸಬೇಕು ಎಂದು ಸಚಿವರು ತಿಳಿಸಿದ್ದರು
ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ.. ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…