ಉಡುಪಿ: ತಾಲೂಕಿನ ನೇಜಾರು ನಿಡಂಬಳ್ಳಿ ಎಂಬಲ್ಲಿಂದ ಅ.18ರಂದು ರಾತ್ರಿ ನಾಪತ್ತೆಯಾಗಿದ್ದ 44ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹ ಹತ್ತು ದಿನ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಇಂದು ಪತ್ತೆಯಾಗಿದೆ.
ಇವರು ನೇಜಾರಿನ ಬಂಗ್ಲೆ ಮನೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪತ್ನಿಯಿಂದ ವಿಚ್ಛೇದನ ಪಡೆದು ಒಬ್ಬಂಟಿಯಾಗಿ ವಾಸವಾಗಿದ್ದರು. ಇವರು ಪ್ರತಿ ದಿನ ಊಟ, ಉಪಹಾರಕ್ಕೆ ಮನೆ ಸಮೀಪದ ದೊಡ್ಡಮ್ಮನ ಮನೆಗೆ ಹೋಗುತ್ತಿದ್ದರು. ಅ. 18ರಂದು ರಾತ್ರಿ ದೊಡ್ಡಮ್ಮನ ಮಗಳು ಜಯಂತಿ ಎಂಬವರು ಪ್ರವೀಣ್ ಅವರಿಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದ್ದರು. 10-15 ನಿಮಿಷದಲ್ಲಿ ಬರುತ್ತೇನೆ ಇಲ್ಲದಿದ್ದರೆ, ಬೆಳಿಗ್ಗೆ ತಿಂಡಿ ತಿನ್ನಲು ಬರುತ್ತೇನೆ ಎಂದು ತಿಳಿಸಿದ್ದರು. ಅಂದು ಊಟಕ್ಕೆ ಬಂದಿರಲಿಲ್ಲ. ಅ. 19ರಂದು ಬೆಳಿಗ್ಗೆ 8ಗಂಟೆಗೆ ಜಯಂತಿ ಅವರು ಕರೆ ಮಾಡಿದಾಗ ಪ್ರವೀಣ್ ಅವರ ಮೊಬೈಲ್ ಸ್ವೀಚ್ ಆಫ್ ಆಗಿತ್ತು.
ಮಂಗಳೂರು: FLIPKART ನಿಂದ ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಬಂದದ್ದು ದೊಡ್ಡ ಕಲ್ಲು – Vishwanews24
ಎರಡು ದಿನಗಳ ಬಳಿಕ ಬ್ರಹ್ಮಾವರ ಸೇತುವೆಯ ಪ್ರವೀಣ್ ಸ್ಕೂಟರ್ ಪತ್ತೆಯಾಗಿತ್ತು. ಆ ಬಳಿಕ ಪ್ರವೀಣ್ ಗಾಗಿ ಅಗ್ನಿಶಾಮಕ ದಳ, ಪೊಲೀಸರ ಸಹಕಾರದೊಂದಿಗೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿತ್ತು. ಆದರೆ ಪ್ರವೀಣ್ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಪ್ರವೀಣ್ ಮೃತದೇಹ ಪತ್ತೆಯಾಗಿದೆ. ಪ್ರವೀಣ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…