ಉಡುಪಿ: ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ಶುಕ್ರವಾರ (ಅ.11) ಬಂಧಿಸಿದ್ದಾರೆ. ಇವರು ಮಲ್ಪೆಗೆ ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದ. ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.
ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಮಲ್ಪೆಯಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…