ಉಡುಪಿ: ಜಿಲ್ಲೆಯ ಮಲ್ಪೆ ಸಮೀಪದ ಪಡು ತೋನ್ಸೆ ಗ್ರಾಮದ ಕಂಬಳ ತೋಟ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರ ವಿರುದ್ಧ ಗಣಿ ಇಲಾಖೆ ಕಾರ್ಯಾಚರಣೆ ನಡೆಸಿದೆ.
ಇಲ್ಲಿ ಹರಿಯುವ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಗಣಿ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮರಳುಗಾರಿಕೆ ನಡೆಸುತ್ತಿದ್ದವರು ಪರಾರಿಯಾಗಿದ್ದಾರೆ. ಆದರೆ ನಾಲ್ಕು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎರಡು ಪುಟ್ಟ ದೋಣಿಗಳನ್ನು ಮಲ್ಪೆ ಠಾಣೆಗೆ ವರ್ಗಾಯಿಸಿದ್ದು, ಬೃಹತ್ ಗಾತ್ರದ ಎರಡು ದೋಣಿಗಳನ್ನು ಕ್ರೈನ್ ಮೂಲಕ ಮೇಲಕ್ಕೆತ್ತಲಾಗಿದೆ.
ಇರ್ಷಾದ್ ಎಂಬಾತ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ಈ ಹಿಂದೆಯೂ ದೂರು ಕೇಳಿಬಂದಿತ್ತು. ಒಂದು ಬಾರಿ ಇಲ್ಲಿ ಕಾರ್ಯಾಚರಣೆಯನ್ನು ನಡೆಸಿ ಸೀಜ್ ಮಾಡಲಾಗಿತ್ತು.ಗಣಿ ಅಧಿಕಾರಿಗಳು ದಂಡವನ್ನೂ ಹಾಕಿದ್ದರು.ಅಷ್ಟು ಮಾತ್ರವಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರವಾಗಿಯೂ ದೂರು ದಾಖಲಿಸಿಕೊಳ್ಳಲಾಗಿತ್ತು. ಇಷ್ಟಾದರೂ ಇರ್ಷಾದ್ ಅಕ್ರಮ ಮರಳುಗಾರಿಕೆ ನಿಲ್ಲಿಸಿರಲಿಲ್ಲ. ಉತ್ತರ ಪ್ರದೇಶದ ಕಾರ್ಮಿಕರನ್ನು ಬಳಸಿ ನಿರಂತರ ಮರಳುಗಾರಿಕೆ ನಡೆಸುತ್ತಲೇ ಇದ್ದ. ಇದೀಗ ಗಣಿ ಅಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಮಲ್ಪೆ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…