Featured

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ ;- ಮೇ ಅಂತ್ಯಕ್ಕೆ ಪೂರ್ಣ – Vishwanews24

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ – ಮೇ ಅಂತ್ಯಕ್ಕೆ ಪೂರ್ಣ

ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ.

ಗುತ್ತಿಗೆ ಪಡೆದಿರುವ ಗೋವಾ ಮೂಲದ ಭಾರ್ಗವಿ ಕಂಪೆನಿಯ ಯಂತ್ರಗಳು ಬಂದರಿನ 3 ಬೇಸಿನ್‌ಗಳಲ್ಲಿ ಮತ್ತು ನ್ಯಾವಿಗೇಶನ್‌ ಚಾನೆಲ್‌ಗ‌ಳಲ್ಲಿ ತುಂಬಿಕೊಂಡಿರುವ ಸುಮಾರು 96 ಸಾವಿರ ಕ್ಯೂಬಿಕ್‌ ಮೀ. ಹೂಳನ್ನು ತೆರವುಗೊಳಿಸಲಾರಂಭಿಸಿವೆ.

ಸದ್ಯ 2 ಯಂತ್ರಗಳು, 30ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಬೇಸಿನ್‌ 1 ಮತ್ತು 2ರಿಂದ ತೆಗೆದ ಹೂಳನ್ನು ದಕ್ಕೆಯಲ್ಲಿ ಸಂಗ್ರಹಿಸಲಾಗುತ್ತದೆ. ಇದಕ್ಕೆ ಉತ್ತಮ ಬೇಡಿಕೆ ಇರುವುದರಿಂದ ಒಣಗಿದ ಬಳಿಕ ಸ್ಥಳಾಂತರ ಮಾಡಲಾಗುತ್ತದೆ. ಬಂದರು ಪ್ರದೇಶದಿಂದ ತೆರವುಗೊಳಿಸಿದ ಹೂಳನ್ನು ಬಾರ್ಜ್‌ನ ಮೂಲಕ ಸುಮಾರು 8 ಕಿ.ಮೀ. ದೂರ ಅಳಸಮುದ್ರಕ್ಕೆ ಒಯ್ದು ಅಲ್ಲಿ ಸುರಿಯಲಾಗುತ್ತದೆ.

ಬಂದರಿನ ಹೂಳೆತ್ತುವುದು ಮೀನುಗಾರರ ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಸರಕಾರದ ಮೇಲೆ ಒತ್ತಡ ಹೇರಿದ್ದರಿಂದ ಕೆಲಸ ಆರಂಭವಾಗಿದೆ. ಮೇ ಅಂತ್ಯದಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago