Featured

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ

ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಮೀನುಗಾರಿಕೆ,ಬಂದರು ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ಮೇರೆಗೆ ಮಂಗಳವಾರ ಕಾಮಗಾರಿ ಪ್ರಾರಂಭಗೊಂಡಿದೆ.

ಬಂದರು ಪ್ರವೇಶ ದ್ವಾರ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಗೇಟ್ ಅಗಲವನ್ನು 24 ಮೀಟರ್ ಮರುವಿನ್ಯಾಸ ಮಾಡಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಮಲ್ಪೆ ಬಂದರು ಸಂಪರ್ಕಿಸುವ ಭಾಗದಲ್ಲಿ ಕಿರು ಸೇತುವೆ ನಿರ್ಮಾಣವನ್ನು ವಿಸ್ತರಿಸಿ, ಗೇಟ್ ಹಾಗೂ ಕಿರು ಸೇತುವೆ ಕಾಮಗಾರಿಯನ್ನು ಏಕಕಾಲದಲ್ಲಿ ಆರಂಭಿಸಿ ಮೀನುಗಾರಿಕಾ ರಜೆ ಹಿನ್ನೆಲೆಯಲ್ಲಿ ಬಂದರಿನ ಚಟುವಟಿಕೆಗೆ ಸಮಸ್ಯೆಯಾಗದಂತೆ ಬಂದರು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪೂರಕವಾಗಿ ಕೆಲಸ ಮಾಡುವಂತೆ ತಿಳಿಸಿದ್ದರು.

ಬಂದರು ಇಲಾಖೆಯ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ತಕ್ಷಣ ತೆರವು ಮಾಡಿ ಕಾಮಗಾರಿಗೆ ಅನುವು ಮಾಡಿ, ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್ ಕಂಬಗಳ ಸ್ಥಳಾಂತರ, ಬಂದರು ಪ್ರವೇಶ ಬದಲಿ ಮಾರ್ಗದ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ, ಸುಗಮ ವಾಹನ ಸಂಚಾರ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಮಲ್ಪೆ ಪೊಲೀಸ್ ಉಪ ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದರು.

ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ ಆರಂಭಗೊಂಡಿದ್ದು, ಮಲ್ಪೆ ಮೀನುಗಾರಿಕಾ ಬಂದರಿನ ಹಳೆ ಪ್ರವೇಶ ದ್ವಾರವನ್ನು ತೆರವು ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಡಿ. ಸುವರ್ಣ, ಕಾರ್ಯದರ್ಶಿ ಜಗನ್ನಾಥ ಕುಂದರ್, ಮೀನುಗಾರ ಮುಖಂಡರಾದ ರಾಮಚಂದ್ರ ಕುಂದರ್, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಸುಭಾಷ್ ಮೆಂಡನ್, ಪ್ರಕಾಶ ಬಂಗೇರ, ಕೃಷ್ಣ ಕೋಟ್ಯಾನ್, ಸುರೇಶ್ ಕುಂದರ್, ಮೀನುಗಾರಿಕೆ,ಬಂದರು ಇಲಾಖೆಯ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

21 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago