ಮಲ್ಪೆ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸ್ವಾಗತಿಸಿದರು.
26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದು, ಎಸ್ ಟಿ ಮೀಸಲಾತಿಯಲ್ಲಿ ಶೋಭಾ ಅವರು ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 13 ಸದಸ್ಯರೊಂದಿಗೆ ಸಮಬಲ ಸಾಧಿಸಿದ್ದು, ಪಂಚಾಯತ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ.
ಪಕ್ಷ ಸೇರ್ಪಡೆ ವೇಳೆ ಕೆಪಿಸಿಸಿ ವಕ್ತಾರಾದ ವೆರೋನಿಕಾ ಕರ್ನೆಲಿಯೋ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ನಾಯಕರಾದ ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಪಂಚಾಯತ್ ಸದಸ್ಯರಾದ ಸತೀಶ್ ನಾಯಕ್, ಸುರೇಶ್ ನಾಯಕ್, ಪ್ರಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ವೆಂಕಟೇಶ್ ಕುಲಾಲ್, ರವಿರಾಜ್ ಲಕ್ಷ್ಮೀನಗರ, ಮೀನಾಪಿಂಟೊ, ಸಿಂಪ್ರಿಯಾ ರೊಡ್ರಿಗಸ್, ಮಂಜುನಾಥ್ ಆಚಾರ್ಯ, ಅನುಷಾ ಆಚಾರ್ಯ, ವಿನಯ ಆಚಾರ್ಯ ಉಪಸ್ಥಿತರಿದ್ದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…