ಮಲ್ಪೆ: ಪ್ರತಿದಿನ ಉಡುಪಿ ಹಾಗೂ ಮಲ್ಪೆ ಬೀಚ್ ಗೆ ಹೊರ ರಾಜ್ಯ ಹಾಗೂ ಜಿಲ್ಲೆಯಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಆದರೆ, ಅವರಿಗೆ ಭದ್ರತೆ ಮತ್ತು ಸಲಹೆ ಸೂಚನೆ ಕೊಡುವಲ್ಲಿ ಮಲ್ಪೆ ಬೀಚ್ ಅನ್ನು ನಿರ್ವಹಣೆಗಾಗಿ ಗುತ್ತಿಗೆ ಪಡೆದಿರುವ ಟೆಂಡರ್ ದಾರರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್ ಆರೋಪಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಸಿಗರಿಗೆ ಸೂಕ್ತ ಸಲಹೆ ಸೂಚನೆ ನೀಡಬೇಕು. ಲೈಫ್ ಜಾಕೇಟ್ ಕೊಡಬೇಕೆಂಬ ಇತ್ಯಾದಿ ನಿಯಮಗಳನ್ನು ಬೀಚ್ ಅಭಿವೃದ್ಧಿ ಸಮಿತಿ ರೂಪಿಸಿದೆ. ಆದರೆ ಬೀಚ್ ಅಭಿವೃದ್ಧಿ ಸಮಿತಿಯ ಕಾನೂನುಗಳನ್ನು ಟೆಂಡರ್ ದಾರರು ಗಾಳಿಗೆ ತೂರಿ, ತಮ್ಮ ಇಚ್ಛೆಗೆ ಅನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ.
ಇದನ್ನು ಒಂದು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ದೂರಿದರು. ಟೆಂಡರ್ ದಾರರ ನಿರ್ಲಕ್ಷ ದಿಂದಾಗಿ ಇಂದು ಮೂರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ಈ ಹಿಂದೆಯೂ ಹಲವು ವಿದ್ಯಾರ್ಥಿಗಳು ನೀರುಪಾಲಾಗಿದ್ದರು. ಇದಕ್ಕೆ ಗುತ್ತಿಗೆದಾರರೇ ನೇರ ಹೊಣೆ. ಅವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಬೀಚ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರವಾಸಿಗರಿಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…