Featured

ಮಲ್ಪೆ : ಬೀಚ್ ಗೆ ಆಗಮಿಸುವ ಪ್ರವಾಸಿಗರಿಗೆ ಭದ್ರತೆ ಮತ್ತು ಸಲಹೆ ಸೂಚನೆ ಕೊಡುವಲ್ಲಿ ಟೆಂಡರ್ ದಾರರು ಸಂಪೂರ್ಣ ವಿಫಲ : ರಮೇಶ್ ಕಾಂಚನ್ ಆರೋಪ – Vishwanews24

ಮಲ್ಪೆ : ಬೀಚ್ ಗೆ ಆಗಮಿಸುವ ಪ್ರವಾಸಿಗರಿಗೆ ಭದ್ರತೆ ಮತ್ತು ಸಲಹೆ ಸೂಚನೆ ಕೊಡುವಲ್ಲಿ ಟೆಂಡರ್ ದಾರರು ಸಂಪೂರ್ಣ ವಿಫಲ

ಮಲ್ಪೆ: ಪ್ರತಿದಿನ ಉಡುಪಿ ಹಾಗೂ ಮಲ್ಪೆ ಬೀಚ್ ಗೆ ಹೊರ ರಾಜ್ಯ ಹಾಗೂ ಜಿಲ್ಲೆಯಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಆದರೆ, ಅವರಿಗೆ ಭದ್ರತೆ ಮತ್ತು ಸಲಹೆ ಸೂಚನೆ ಕೊಡುವಲ್ಲಿ ಮಲ್ಪೆ ಬೀಚ್ ಅನ್ನು ನಿರ್ವಹಣೆಗಾಗಿ ಗುತ್ತಿಗೆ ಪಡೆದಿರುವ ಟೆಂಡರ್ ದಾರರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಉಡುಪಿ‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್ ಆರೋಪಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಸಿಗರಿಗೆ ಸೂಕ್ತ ಸಲಹೆ ಸೂಚನೆ ನೀಡಬೇಕು. ಲೈಫ್ ಜಾಕೇಟ್ ಕೊಡಬೇಕೆಂಬ ಇತ್ಯಾದಿ ನಿಯಮಗಳನ್ನು ಬೀಚ್ ಅಭಿವೃದ್ಧಿ ಸಮಿತಿ ರೂಪಿಸಿದೆ. ಆದರೆ ಬೀಚ್ ಅಭಿವೃದ್ಧಿ ಸಮಿತಿಯ ಕಾನೂನುಗಳನ್ನು ಟೆಂಡರ್ ದಾರರು ಗಾಳಿಗೆ ತೂರಿ, ತಮ್ಮ ಇಚ್ಛೆಗೆ ಅನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ.

ಇದನ್ನು ಒಂದು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ದೂರಿದರು. ಟೆಂಡರ್ ದಾರರ ನಿರ್ಲಕ್ಷ ದಿಂದಾಗಿ ಇಂದು ಮೂರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ಈ ಹಿಂದೆಯೂ ಹಲವು ವಿದ್ಯಾರ್ಥಿಗಳು ನೀರುಪಾಲಾಗಿದ್ದರು. ಇದಕ್ಕೆ ಗುತ್ತಿಗೆದಾರರೇ ನೇರ ಹೊಣೆ.‌ ಅವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು‌ ಎಂದು ಒತ್ತಾಯಿಸಿದರು.

ಬೀಚ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರವಾಸಿಗರಿಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

12 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

12 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago