ಉಡುಪಿ : ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗುವ ಮಲ್ಪೆ ಬೀಚ್ ಇದೀಗ ಮತ್ತೆ ವಿವಾದದ ಮೂಲಕ ಸುದ್ದಿಯಲ್ಲಿದೆ. ಇದೀಗ ಒಂದಿಷ್ಟು ಜನ ಬೀಚ್ ಬೋಟ್ ನವರು ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡುತ್ತಿರುವ ವಿಡಿಯೋ ಒಂದು ಸದ್ಯ ಜಿಲ್ಲೆಯಲ್ಲಿ ವೈರಲ್ ಆಗಿದ್ದು, ಮಲ್ಪೆಯಲ್ಲಿನ ಟೂರಿಸ್ಟ್ ಬೋಟ್ ನವರು ಪ್ರವಾಸಿಗರ ತಂಡಕ್ಕೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಬುಧವಾರ ಮಲ್ಪೆ ಬೀಚಿನಲ್ಲಿ ಸಾಕಷ್ಟು ಪ್ರವಾಸಿಗರ ದಂಡು ಹರಿದು ಬಂದಿತ್ತು. ಪ್ರವಾಸಿಗರೇ ತುಂಬಿರುವ ಸಂದರ್ಭದಲ್ಲಿ ಒಂದಿಷ್ಟು ಬೀಚ್ ಬೋಟ್ ಮಂದಿ, ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡುತ್ತಿರುವ ವಿಡಿಯೋ ಒಂದು ಸದ್ಯ ಜಿಲ್ಲೆಯಲ್ಲಿ ವೈರಲ್ ಆಗಿದೆ. ನಾಲ್ಕೈದು ಮಂದಿ ಒಟ್ಟು ಸೇರಿ ಪ್ರವಾಸಿಗರನ್ನ ಅಟ್ಟಾಡಿಸಿಕೊಂಡು ಯರ್ರಾಬಿರಿ ಹಲ್ಲೆ ಮಾಡುತ್ತಿರುವ ದೃಶ್ಯ ಬೀಚಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೇ ದೃಶ್ಯಾವಳಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲೂ ಕೂಡ ವೈರಲ್ ಆಗಿದೆ.
ಇದೇ ವಿಚಾರವಾಗಿ ಎರಡು ಪ್ರಕರಣಗಳು ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಒಂದು ಪ್ರವಾಸಿಗರು ಹೊಡೆದಾಡುತ್ತಿರುವ ವೇಳೆ ಸ್ಥಳೀಯರು ಜಗಳ ಬಿಡಿಸಿರುವುದಾಗಿ ಪ್ರಕರಣ ದಾಖಲಾಗಿದ್ದರೆ. ಇನ್ನೊಂದು ಪ್ರಕರಣ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವುದಾಗಿ ದಾಖಲಾಗಿದೆ. ಮಲ್ಪೆಯ ಬಾಪು ತೋಟ ನಿವಾಸಿ ಅರುಣ್ ಸುವರ್ಣ ಎನ್ನುವವರು ಟೂರಿಸ್ಟ್ ಬೋಟ್ ನವರ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರವಾಸಿಗರ ಜೀವನ ಜೊತೆ ಟೂರಿಸ್ಟ್ ಬೂಟ್ ನವರು ಚೆಲ್ಲಾಟ ಆಡುತ್ತಿದ್ದಾರೆ ಎಂದು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಡಾಕ್ಟರ್ ಅರುಣ್ ಕೆ “ನಿನ್ನೆ ಸಂಜೆ 5:45 ಗಂಟೆಯಿಂದ 6 ಗಂಟೆಯ ನಡುವೆ ಎರಡು ಗುಂಪುಗಳು ಗಲಾಟೆ ಮಾಡಿಕೊಂಡಿರುವ ವಿಷಯ ನಮ್ಮ ಗಮನಕ್ಕೆ ಬಂದಿದೆ. ಸಿಸಿಟಿವಿ ದೃಶ್ಯ ಗಳ ಆಧಾರದ ಮೇಲೆ ಸ್ಥಳದಲ್ಲಿದ್ದ ಹೋಂ ಗಾರ್ಡ ಅವರು ನಮಗೆ ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಮಲ್ಪೆ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದೇವೆ, ಮುಂದೆ ಆರೋಪಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ” ಎಂದರು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…