Featured

ಮಲ್ಪೆ ಬೀಚ್ ನಲ್ಲಿ ತೊರಕೆ (ಸ್ಟಿಂಗ್ ರೇ) ಮೀನು ಗಳ ಹಾವಳಿ ; ಸಮುದ್ರಕ್ಕೆ ಇಳಿಯುವ ಮುನ್ನ ಎಚ್ಚರ..!!

ಉಡುಪಿ : ಉಡುಪಿ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ನಲ್ಲಿ ಕಳೆದ ಎರಡು ದಿನಗಳಿಂದ ಬೀಚಿನಲ್ಲಿ ಸಮುದ್ರಕ್ಕೆ ಇಳಿದವರಿಗೆ ತೊರಕೆ ಮೀನು ಅಥವಾ ಸ್ಟಿಂಗ್ ರೇ ಇಂಜೆಕ್ಷನ್ ರುಚಿ ತೋರಿಸಿದೆ.

ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ಕಂಡು ಬರುವ ಈ ಮೀನು ಈ ಅವಧಿಗೆ ಸಂತಾನೋತ್ಪತ್ತಿಗಾಗಿ ಕಡಲ ತಡೆಗೆ ಬರುತ್ತದೆ. ಅದರಂತೆ ಈ ವರ್ಷವೂ ಸಾಕಷ್ಟು ಸಂಖ್ಯೆಯಲ್ಲಿ ಮೀನುಗಳು ತೀರ ಸೇರಿವೆ .ಇನ್ನು ಒಂದು ವಾರದವರೆಗೆ ಈ ಮೀನುಗಳು ಸಮುದ್ರ ಕಿನಾರೆಯಲ್ಲಿ ಇರುತ್ತವೆ ಎಂದು ಹೇಳಲಾಗಿದೆ .

ಸಂತಾನೋತ್ಪತ್ತಿಗಾಗಿ ಕಡಲ ಕಿನಾರೆಗೆ ಆಗಮಿಸುವ ಸಂದರ್ಭದಲ್ಲಿ ಈ ತೊರಕೆ ಮೀನುಗಳು ತೀರಾ ಆಕ್ರಮಣಕಾರಿಯಾಗಿದ್ದು, ಸಮುದ್ರದಲ್ಲಿ ಈಜಲು ನೀರಿಗಿಳಿಯುವ ಪ್ರವಾಸಿಗರಿಗೆ ಇದರ ಚೂಪಾದ ಬಾಲದ ಇಂಜೆಕ್ಷನ್ ಭಾಗ್ಯ ಲಭಿಸಿದೆ.

ಕಳೆದ ಶುಕ್ರವಾರದಿಂದ ಮಲ್ಪೆ ಬೀಚ್ ನಲ್ಲಿ ಈ ತೊರಕೆ ಮೀನಿನ ದಾಳಿಯ ಸುಮಾರು 12 ಪ್ರಕರಣಗಳು ವರದಿಯಾಗಿದೆ. ದಾಳಿಗೆ ಒಳಗಾದ ಪ್ರವಾಸಿಗರು ಇಲ್ಲಿರುವ ಲೈಫ್ ಗಾರ್ಡ್ ಗಳ ಬಳಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಹೆಚ್ಚು ಗಾಯಗೊಂಡವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಲ್ಪೆ ಬೀಚ್ ನಲ್ಲಿ ತೊರಕೆ ಪ್ರತಾಪ ಕಳೆದ 7 ರಿಂದ 8 ವರ್ಷಗಳಿಂದ ನಡೆಯುತ್ತಿದೆ. ಮಳೆಗಾಲ ಕಳೆಯುತ್ತಿದಂತೆ ಸಮುದ್ರ ನೀರು ತಂಪಾಗುತ್ತದೆ. ಈ ಹಿನ್ನಲೆಯಲ್ಲಿ ಸಮುದ್ರ ತೀರಕ್ಕೆ ಮೊಟ್ಟೆ ಇಡಲು ತೊರೆಕೆಗಳು ಆಗಮಿಸುತ್ತವೆ. ಈ ಹಾವಳಿ ಇನ್ನೂ 10 ದಿನ ಮುಂದುವರೆಯುವ ಸಾಧ್ಯತೆ ಇದ್ದು. ಪ್ರವಾಸಿಗರು ಮಲ್ಪೆ ಬೀಚ್ ನಲ್ಲಿ ಸಮುದ್ರಕ್ಕೆ ಇಳಿಯುವ ಮೊದಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ.

ಚೂಪಾದ ಬಾಲದಿಂದ ದಾಳಿ :ತೊರಕೆ ಮೀನು ಬಾಲದ ಮುಳ್ಳಿನಿಂದ ಚುಚ್ಚಿದಾಗ ವಿಪರೀತ ರಕ್ತ ಸ್ರಾವವಾಗುತ್ತದೆ ಹಾಗೂ ತುಂಬಾ ನೋವು ಕೂಡಾ ಉಂಟಾಗುತ್ತದೆ. ತೊರಕೆ ಮೀನಿನ ಮುಳ್ಳು ನಂಜಿನ ಗುಣವುಳ್ಳದ್ದರಿಂದ ಮೀನಿನ ಮುಳ್ಳು ಚುಚ್ಚಿದ ಬಳಿಕ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಕಣ್ಣಿಗೆ ಕಾಣಿಸುವುದಿಲ್ಲ ಎರಡು ವರ್ಷಗಳ ಹಿಂದೆ ಇದೇ ರೀತಿಯಲ್ಲಿ ತೊರಕೆ ಮೀನುಗಳು ಪ್ರವಾಸಿಗರಿಗೆ ಮುಳ್ಳು ಚುಚ್ಚಿ ಗಾಯಗೊಳಿಸಿದ್ದವು. ಈ ತೊರಕೆ ಮೀನುಗಳ ಬಣ್ಣ ಹಾಗೂ ಮರಳಿನ ಬಣ್ಣ ಒಂದೇ ರೀತಿ ಗೋಚರಿಸುವ ಕಾರಣ ನೀರಿಗಿಳಿದು ಆಟವಾಡುವ ಪ್ರವಾಸಿಗರು ಕಾಲಿನಡಿಯಲ್ಲಿ ಸಂಚರಿಸುವ ತೊರಕೆ ಮೀನಿನ ಅರಿವಿಲ್ಲದೆ ಮೆಟ್ಟಿ ಮುಳ್ಳನ್ನು ಚುಚ್ಚಿಸಿಕೊಳ್ಳುತಿದ್ದಾರೆ.  ತೊರಕೆ ಮೀನಿನ ಮುಳ್ಳು ಚುಚ್ಚಿದ ಬಳಿಕ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.ಈ ಹಿನ್ನೆಲೆಯಲ್ಲಿ ಕರಾವಳಿಯ ಕಡಲ ತಡಿಗೆ ಬರುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕಾಗಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago