ಮಲ್ಪೆ : ಇಲ್ಲಿನ ಬೀಚ್ ಆಸುಪಾಸಿನಲ್ಲಿ, ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಮೀನಿನ ಆಹಾರ ಖಾದ್ಯಗಳಿಗೆ ಕೃತಕ ಬಣ್ಣ ಹಾಗೂ ರುಚಿ ಬರುವ ರಾಸಾಯನಿಕ ಸೇರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಇಂದು ಮಲ್ಪೆ ಬೀಚ್ ಬಳಿ ಇರುವ ಹೊಟೇಲ್ ಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.
ಮಲ್ಪೆ ಬೀಚ್ ಸುತ್ತಮುತ್ತಲು ಇಪ್ಪತ್ತಕ್ಕೂ ಅಧಿಕ ಮೀನಿನ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳಿದ್ದು, ಇಲ್ಲಿ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸಿ ಇವುಗಳನ್ನು ತಿನ್ನುತ್ತಾರೆ. ರಸ್ತೆಯಂಚಿನಲ್ಲಿ ಮೀನಿನ ಫ್ರೈ, ಮಸಾಲ ಫ್ರೈ, ಚಿಕನ್ ಕಬಾಬ್, ಚೈನಿಸ್ ಆಹಾರಗಳ ಮಾರಾಟ ಮಾಡುವ ಹೊಟೇಲ್‌ಗಳಿವೆ. ಇಲ್ಲಿನ ಹೆಚ್ಚಿನ ಹೊಟೇಲ್‌ಗಳಲ್ಲಿ ಆಹಾರ ಪದಾರ್ಥಗಳಿಗೆ ಕೃತಕ ಬಣ್ಣ, ಅತೀಯಾದ ರುಚಿ ಬರುವ ರಾಸಾಯನಿಕ ಬೆರೆಸಿ ತಯಾರು ಮಾಡುತ್ತಾರೆ ಎಂದು ಬಹಳಷ್ಟು ಪ್ರವಾಸಿಗರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ತಕ್ಷಣ ಬೀಚ್ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭಾ ಪೌರಾಯುಕ್ತರಿಗೆ ದಾಳಿ ನಡೆಸಿ ಪರಿಶೀಲಿಸಲು ನಿರ್ದೇಶನ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೌರಾಯುಕ್ತ ರಾಯಪ್ಪ ಅವರ ನೇತೃತ್ವದಲ್ಲಿ ನಗರಸಭೆಯ ಅಧಿಕಾರಿಗಳು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಹೆಚ್ಚಿನ ಹೊಟೇಲ್‌ಗಳಲ್ಲಿ ಮಾನವನ ಜೀವಕ್ಕೆ ಹಾನಿಕಾರಕವಾಗುವ ಕೃತಕ ಬಣ್ಣ ಹಾಗೂ ಅಜಿನಮೊಟೊ ಬಳಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಹೊಟೇಲ್ ಮಾಲಕರಿಗೆ ಎಚ್ಚರಿಕೆ ನೀಡಿರುವ ಪೌರಾಯುಕ್ತರು ಇನ್ನು ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳಿಗೆ ವಿಷಯುಕ್ತ ಬಣ್ಣ, ಟೆಸ್ಟೀ ಪೌಡರ್ ಬಳಕೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.
ಇನ್ನು ಮುಂದೆ ಪ್ರತಿನಿತ್ಯ ಇದರ ಬಗ್ಗೆ ನಿಗಾ ವಹಿಸುತ್ತೇವೆ. ಮತ್ತೊಮ್ಮೆ ಈ ರೀತಿ ಕಂಡುಬಂದರೆ ಹೊಟೇಲ್‌ಗಳನ್ನೇ ಮುಚ್ಚಿ ಕಾನೂನು ರೀತ್ಯಾ ಕ್ರಮಕೈಗೊಳ್ಳುವುದಾಗಿ ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಅದೇ ರೀತಿ ಏಕಬಳಕೆಯ ಪ್ಲಾಸ್ಟಿಕ್ ಉಪಯೋಗಿಸದಂತೆ ಖಡಕ್ ವಾರ್ನಿಂಗ್ ಸಹ ನೀಡಿ ಬಂದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…