Featured

ಮಲ್ಪೆ ಬೋಟ್ ನಾಪತ್ತೆ ಪ್ರಕರಣ : ಶಾಸಕರಾದ ರಘುಪತಿ ಭಟ್ ನೇತೃತ್ವದಲ್ಲಿ ಮೀನುಗಾರರ ಕುಟುಂಬದ ಜೊತೆಗೆ ಸಮುದ್ರ ಪರಿಶೀಲನೆ -Vishwanews24

ಉಡುಪಿ: ನಾಪತ್ತೆ ಮೀನುಗಾರರ ಸುಳಿವು ಸಿಗದೇ ಇರುವುದರಿಂದ ಸೋಮವಾರ ಶಾಸಕರಾದ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಮೀನುಗಾರರ ಕುಟುಂಬದ ಜೊತೆಗೆ ಪರಿಶೀಲನೆ ನಡೆಸಲು ಸಮುದ್ರಕ್ಕೆ ತೆರಳಿದ್ದಾರೆ.‌

ಮೀನುಗಾರರು ನಾಪತ್ತೆಯಾದ ಬಗ್ಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮಾನ್ ಅವರನ್ನು ಭೇಟಿ ನೀಡಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ರಘುಪತಿ ಭಟ್ ಅವರು ಮಾತುಕತೆ ನಡೆಸಿದ್ದರು. ಬಳಿಕ ಸ್ವತಃ ನಿರ್ಮಲಾ ಸೀತಾರಾಮಾನ್ ಅವರೇ ಉಡುಪಿಗೆ ಆಗಮಿಸಿ ನಾಪತ್ತೆಯಾದ ಮೀನುಗಾರರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು ಮತ್ತು ಕೇಂದ್ರ ಸರಕಾರ ಮತ್ತಷ್ಟು ಪತ್ತೆ ಕಾರ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಸಚಿವರಿಗೆ ಮನವಿ ಮಾಡಿದ್ದು, ನಮ್ಮನ್ನು ಕೂಡ ಬೋಟ್ ಮೂಲಕ ಸಮುದ್ರಕ್ಕೆ ಹೋಗುವಂತೆ ಅವಕಾಶ ನೀಡಬೇಕು ಮತ್ತು ನಾಪತ್ತೆಯಾದ ಸ್ಥಳವನ್ನು ನಾವು ಕೂಡ ವೀಕ್ಷಿಸಬೇಕು ಎಂದ ಕೇಳಿಕೊಂಡಿದ್ದರು.‌ ಅದೇ ರೀತಿ ಕುಟುಂಬಸ್ಥರ ಮನವಿಯ ಮೇರೆಗೆ ಶಾಸಕರಾದ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಸೋಮವಾರ ಮುಂಜಾನೆ 4 ಗಂಟೆಗೆ ಭಾರತೀಯ ಭೂಸೇನೆಯ ಅಧಿಕಾರಿಗಳ ಜೊತೆಗೆ ಮತ್ತು ನಾಪತ್ತೆಯಾದ ಮೀನುಗಾರರ ಕುಟುಂಬದ ಜೊತೆಗೆ ಪರಿಶೀಲನೆಗೆ ತೆರಳಿದ್ದಾರೆ.

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿ ಕಣ್ಮರೆಯಾಗಿ ನಾಲ್ಕು ತಿಂಗಳು ಕಳೆದರೂ ಸುವರ್ಣ ತ್ರಿಭುಜ ಬೋಟ್ ಹಾಗೂ ಏಳು ಮೀನುಗಾರರು ಇನ್ನು ಪತ್ತೆಯಾಗಿಲ್ಲ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

20 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

20 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago