ಉಡುಪಿ

ಮಲ್ಪೆ ಬೋಟ್ ನಾಪತ್ತೆ ಪ್ರಕರಣ : ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳಿಲ್ಲ : ಶಾಸಕ ರಘುಪತಿ ಭಟ್ -Vishwanews24

ಉಡುಪಿ :‘ಸಮುದ್ರದಲ್ಲಿ ಮುಳುಗಿರುವ ಮೀನುಗಾರಿಕಾ ದೋಣಿ ಸುವರ್ಣ ತ್ರಿಭುಜದಲ್ಲಿದ್ದ ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳೂ ಅಲ್ಲಿಲ್ಲ. ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮುದ್ರದಲ್ಲಿ ಸುವರ್ಣ ತ್ರಿಭುಜ ದೋಣಿಯ ಅವಶೇಷಗಳು ಪತ್ತೆಯಾಗಿವೆ. ಕಾರ್ಯಾಚರಣೆಯನ್ನು ವೀಕ್ಷಿಸಲು ನನ್ನನ್ನು ಹಾಗೂ ಮೀನುಗಾರರ 9 ಮಂದಿ ಮುಖಂಡರನ್ನು ನೌಕಾಪಡೆಯ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ಸುಮಾರು 5 ದಿನ ಸಮುದ್ರದಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿಸಿದರು…

‘ಇಡೀ ಕಾರ್ಯಾಚರಣೆಯ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ದೋಣಿಯ ಅವಶೇಷಗಳನ್ನು ನಾವು ಸ್ವತಃ ನೋಡಿದ್ದೇವೆ. ಅವು ಕಂಡಲ್ಲೇ ನಾವಿದ್ದ ದೋಣಿಯನ್ನು ನಿಲ್ಲಿಸಿ ನೌಕಾಪಡೆಯ ಮುಳುಗು ತಜ್ಞರನ್ನು ಕೆಳಗಿಳಿಸಲಾಯಿತು. ಮೀನುಗಾರರ ಸಮ್ಮುಖದಲ್ಲೇ ಹುಡುಕಾಟ ಮಾಡಿದ್ದರಿಂದ ಕಾರ್ಯಾಚರಣೆ ಯಶಸ್ವಿಯಾಗಿದೆ. ಎಂದು ಹೇಳಿದರು.

ನೌಕಾಪಡೆಯ ನುರಿತ ಕ್ಯಾಪ್ಟನ್‌ಗಳ ಸಮ್ಮುಖದಲ್ಲಿ, ಶಬ್ದದ ಕಂಪನ ಆಧರಿಸಿದ ಸೋನಾರ್ ತಂತ್ರಜ್ಞಾನ ಬಳಸಿ ಶೋಧ ಕಾರ್ಯ ನಡೆಸಲಾಯಿತು. ಕೇವಲ ಬೋಟ್ ಅವಶೇಷಗಳು ಪತ್ತೆಯಾಗಿದೆ. ಆದರೆ ಈ ದೋಣಿಯಲ್ಲಿದ್ದ ಮೀನುಗಾರರು ಬದುಕಿ ಉಳಿದಿರುವ ಸಾಧ್ಯತೆ ಕಡಿಮೆ ಎಂದು ಹೇಳಿದರು.

ದೋಣಿಯಲ್ಲಿದ್ದ ಏಳೂ ಮೀನುಗಾರರ ಕುಟುಂಬಗಳಿಗೆ ದೊಡ್ಡ ರೀತಿಯ ಪರಿಹಾರ ನೀಡುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ ಮನವಿ ಮಾಡಲಿದ್ದೇವೆ ಎಂದು ಹೇಳಿದರು.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago