ಮಲ್ಪೆ : ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಲೆಗಳ ರಭಸಕ್ಕೆ ಬೋಟ್ ಅಲುಗಾಡಿದ ಪರಿಣಾಮ ಆಕಸ್ಮಿಕವಾಗಿವಾಗಿ ಬೋಟ್ ಗೆ ಬಿದ್ದು ಗಂಭೀರ ಗಾಯಗೊಂಡ ಮೀನುಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ನಾಗರಾಜನ್(27) ಮೃತಪಟ್ಟ ಮೀನುಗಾರ. ಮಲ್ಪೆಯ ಪ್ರತಾಪ್ ಸುವರ್ಣ ರವರ ಮಾಲಕತ್ವದ ಶ್ರೀಕೃಷ್ಣ ಚಕ್ರ ಲೈಲ್ಯಾಂಡ್ ಮೀನುಗಾರಿಕಾ ಬೋಟ್ ನಲ್ಲಿ ಕಲಾಸಿಯಾಗಿದ್ದ ನಾಗರಾಜನ್ ಅವರು ಫೆ. 5 ರಂದು ರಾತ್ರಿ ಇತರ ಮೀನುಗಾರರೊಂದಿಗೆ 10 ಗಂಟೆಗೆ ಮೀನುಗಾರಿಕೆ ನಡೆಸಲು ಮಲ್ಪೆ ಬಂದರಿನಿಂದ ಹೊರಟಿದ್ದರು. ಈ ವೇಳೆ ಫೆ.11 ರಂದು ಅರಬ್ಬೀ ಸಮುದ್ರದ 200 ನಾಟಿಕಲ್ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮುಂಜಾನೆ 5:45 ಗಂಟೆಗೆ ಸಮುದ್ರದ ಅಲೆಗಳ ಅಬ್ಬರಕ್ಕೆ ಬೋಟ್ ಅಲುಗಾಡಿದ ಪರಿಣಾಮ ನಾಗರಾಜನ್ ಆಕಸ್ಮಿಕವಾಗಿ ಆಯತಪ್ಪಿ ಬೋಟಿನ ಬಲೆ ಎಳೆಯುವ ಡ್ರಮ್ ವಿಂಚ್ ಗೆ ಬಿದ್ದಿದ್ದರು. ಇದರಿಂದ ಡ್ರಮ್ ವಿಂಚ್ ಆವರ ತಲೆಯ ಹಿಂಬದಿಗೆ ತಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಮಾವ ಲೋಕೇಶ್ ನಾರಾಯಣ ಹರಿಕಾಂತ ಎಂಬವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…