Featured

ಮಲ್ಪೆ: ಬೋಟ್ ನಿಂದ ಬಿದ್ದು ಗಂಭೀರ ಗಾಯಗೊಂಡ  ಮೀನುಗಾರ ಮೃತ್ಯು – Vishwanews24

ಮಲ್ಪೆ: ಬೋಟ್ ನಿಂದ ಬಿದ್ದು ಗಂಭೀರ ಗಾಯಗೊಂಡ  ಮೀನುಗಾರ ಮೃತ್ಯು

ಮಲ್ಪೆ : ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಲೆಗಳ ರಭಸಕ್ಕೆ ಬೋಟ್ ಅಲುಗಾಡಿದ ಪರಿಣಾಮ ಆಕಸ್ಮಿಕವಾಗಿವಾಗಿ ಬೋಟ್ ಗೆ ಬಿದ್ದು ಗಂಭೀರ ಗಾಯಗೊಂಡ ಮೀನುಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ನಾಗರಾಜನ್(27) ಮೃತಪಟ್ಟ ಮೀನುಗಾರ. ಮಲ್ಪೆಯ ಪ್ರತಾಪ್ ಸುವರ್ಣ ರವರ ಮಾಲಕತ್ವದ ಶ್ರೀಕೃಷ್ಣ ಚಕ್ರ ಲೈಲ್ಯಾಂಡ್ ಮೀನುಗಾರಿಕಾ ಬೋಟ್ ನಲ್ಲಿ ಕಲಾಸಿಯಾಗಿದ್ದ ನಾಗರಾಜನ್ ಅವರು ಫೆ. 5 ರಂದು ರಾತ್ರಿ ಇತರ ಮೀನುಗಾರರೊಂದಿಗೆ 10 ಗಂಟೆಗೆ ಮೀನುಗಾರಿಕೆ ನಡೆಸಲು ಮಲ್ಪೆ ಬಂದರಿನಿಂದ ಹೊರಟಿದ್ದರು. ಈ ವೇಳೆ ಫೆ.11 ರಂದು ಅರಬ್ಬೀ ಸಮುದ್ರದ 200 ನಾಟಿಕಲ್ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮುಂಜಾನೆ 5:45 ಗಂಟೆಗೆ ಸಮುದ್ರದ ಅಲೆಗಳ ಅಬ್ಬರಕ್ಕೆ ಬೋಟ್ ಅಲುಗಾಡಿದ ಪರಿಣಾಮ ನಾಗರಾಜನ್ ಆಕಸ್ಮಿಕವಾಗಿ ಆಯತಪ್ಪಿ ಬೋಟಿನ ಬಲೆ ಎಳೆಯುವ ಡ್ರಮ್ ವಿಂಚ್ ಗೆ ಬಿದ್ದಿದ್ದರು. ಇದರಿಂದ ಡ್ರಮ್ ವಿಂಚ್ ಆವರ ತಲೆಯ ಹಿಂಬದಿಗೆ ತಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಮಾವ ಲೋಕೇಶ್ ನಾರಾಯಣ ಹರಿಕಾಂತ ಎಂಬವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago