ಪಡುಬಿದ್ರಿ : ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗಾಗಿ ಸಮುದ್ರಕ್ಕಿಳಿದ ಮೀನುಗಾರರು ನಾಪತ್ತೆಯಾಗಿ ತಿಂಗಳು ಕಳೆದರೂ ಸುಳಿವು ಲಭ್ಯವಾಗದೆ ಇರುವುದರಿಂದ ನಾಪತ್ತೆಯಾದವರು ಕ್ಷೇಮವಾಗಿ ಹಿಂತಿರುಗಲಿ ಎಂದು ಪಡುಬಿದ್ರಿ ಉದಯಾದ್ರಿ ಪ್ರಸನ್ನ ಪಾರ್ವತಿ ಬಾಲ ಗಣಪತಿ ದೇವಸ್ಥಾನದಲ್ಲಿ ಭಗವತಿ ಗ್ರೂಪಿನ ಪರವಾಗಿ ಪೂಜೆ ಮತ್ತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಗ್ರೂಪಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಪ್ರಾರ್ಥನೆ ಸಲ್ಲಿಸಿದರು..
ಮಲ್ಪೆ ಬಂದರಿನಿಂದ ಸುವರ್ಣ ತ್ರಿಭುಜ ಬೋಟ್‌ನಲ್ಲಿ ಆಳಸಮುದ್ರ ಟ್ರಾಲ್ ಬೋಟ್ ಮಾಲೀಕ ಚಂದ್ರಶೇಖರ್ ಕೋಟ್ಯಾನ್, ಮೀನುಗಾರರಾದ ದಾಮೋದರ್, ಲಕ್ಷ್ಮಣ, ಸತೀಶ್, ರವಿ, ಹರೀಶ್, ರಮೇಶ್ ಅವರು ಡಿ.13ರಂದು ರಾತ್ರಿ 11 ಗಂಟೆಗೆ ಮೀನುಗಾರಿಕೆಗೆ ತೆರಳಿದ್ದರು.
ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರ ಕಣ್ಮರೆಯಾಗಿ ಒಂದು ತಿಂಗಳು ಪೂರ್ಣಗೊಂಡಿದೆ. ಆದರೆ ಈವರೆಗೂ ಮೀನುಗಾರರಿಗೆ ಸಂಬಂಧಿಸಿ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…