Featured

ಮಲ್ಪೆ ಬೋಟ್ ಪ್ರಕರಣ ; ಸ್ಪಂದಿಸದ ಕೇಂದ್ರ ಹಾಗೂ ರಾಜ್ಯ ಸರಕಾರ , ಹೆದ್ದಾರಿ ತಡೆದು ಪ್ರತಿಭಟನೆಗೆ ನಿರ್ಧಾರಿಸಿದ ಮೀನುಗಾರರು..

ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 7 ಮಂದಿ ಮೀನುಗಾರರು ಸಹಿತ ಬೋಟ್‌ ನಾಪತ್ತೆಯಾಗಿ 19 ದಿನ ಕಳೆದರೂ ಅವರ ಪತ್ತೆಗೆ ಗಂಭೀರ ಕ್ರಮ ಕೈಗೊಳ್ಳದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜ. 6ರಂದು ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಿದ್ದಾರೆ.

ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರಿನಲ್ಲಿ ಬುಧವಾರ ನಡೆದ ಕಾರವಾರದಿಂದ ಮಂಗಳೂರು ವರೆಗಿನ ಮೀನುಗಾರ ಸಂಘಟನೆಗಳ ಬೃಹತ್‌ ಸಮಾಲೋಚನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಮಾತನಾಡಿ, ಸರಕಾರ ಮೀನುಗಾರರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ. ಡಿ. 13ರಂದು ಬೋಟ್ ನಾಪತ್ತೆಯಾಗಿದ್ದರೂ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಮೀನುಗಾರಿಕಾ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ಸತೀಶ್‌ ಕುಂದರ್‌ ಮತ್ತು ಮಲ್ಪೆ ಡೀಪ್‌ ಸೀ ಟ್ರಾಲ್‌ ಬೋಟ್‌ ಅಸೋಸಿಯೇಶನಿನ ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ ಮಾತನಾಡಿ, ಮೀನುಗಾರರು ನಾಪತ್ತೆಯಾಗಿ 19 ದಿನ ಕಳೆದಿವೆ. ಮೀನುಗಾರಿಕೆ ಸಚಿವ ರಾಗಲಿ, ಉಸ್ತುವಾರಿ ಸಚಿವರಾಗಲಿ ಸಭೆಕರೆದು ಚರ್ಚೆ ಕೂಡ ನಡೆಸಿಲ್ಲ. ಮೀನುಗಾರರೆಲ್ಲರೂ ಒಗ್ಗಟ್ಟಿನಿಂದ ಸರಕಾರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ; ಇದಕ್ಕಾಗಿ  ಜೈಲ್‌ ಭರೋಗೂ ಸಿದ್ಧರಾಗಿ ರಬೇಕು ಎಂದರು.

ಜ. 6ರಂದು ನಡೆಯುವ ಪ್ರತಿಭಟನೆಯಲ್ಲಿ ಮೂರು ಜಿಲ್ಲೆಗಳ ಮೀನುಗಾರರು ಭಾಗವಹಿಸಿ, ಮೀನುಗಾರರ ಶಕ್ತಿ ಏನೆಂಬುವುದನ್ನು ತೋರಿಸಬೇಕು. ಆ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಬೇಕು. ಅಲ್ಲದೆ, ಇನ್ಮುಂದೆ ಸರಕಾರ ಮೀನುಗಾರರ ಸುರಕ್ಷತೆಗೆ ಹೆಚ್ಚಿನ ಕ್ರಮಕೈಗೊಳ್ಳುವಂತೆ ಮಾಡಬೇಕಾಗಿದೆ ಎಂದರು..

ಜ. 6ರಂದು ಬೆಳಗ್ಗೆ 10ಕ್ಕೆ ಉಡುಪಿಯ ಕರಾವಳಿ ಬೈಪಾಸ್‌ನಲ್ಲಿ ನಡೆಯುವ ರಾ.ಹೆ. ತಡೆಯಲ್ಲಿ ಉಪ್ಪಳದಿಂದ ಕಾರವಾರದವರೆಗೆ ಮೂರು ಜಿಲ್ಲೆಯಿಂದ ಸುಮಾರು 30 ಸಾವಿರಕ್ಕೂ ಮಿಕ್ಕಿ ಮೀನುಗಾರರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 8.30ಕ್ಕೆ ಮಲ್ಪೆ ಮೀನುಗಾರಿಕೆ ಬಂದರಿನಿಂದ ಬೈಪಾಸ್‌ವರೆಗೆ ಪಾದಯಾತ್ರೆ ನಡೆಯಲಿದೆ.
 ಸತೀಶ್‌ ಕುಂದರ್‌, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago