ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 7 ಮಂದಿ ಮೀನುಗಾರರು ಸಹಿತ ಬೋಟ್ ನಾಪತ್ತೆಯಾಗಿ 19 ದಿನ ಕಳೆದರೂ ಅವರ ಪತ್ತೆಗೆ ಗಂಭೀರ ಕ್ರಮ ಕೈಗೊಳ್ಳದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜ. 6ರಂದು ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಿದ್ದಾರೆ.
ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರಿನಲ್ಲಿ ಬುಧವಾರ ನಡೆದ ಕಾರವಾರದಿಂದ ಮಂಗಳೂರು ವರೆಗಿನ ಮೀನುಗಾರ ಸಂಘಟನೆಗಳ ಬೃಹತ್ ಸಮಾಲೋಚನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾತನಾಡಿ, ಸರಕಾರ ಮೀನುಗಾರರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ. ಡಿ. 13ರಂದು ಬೋಟ್ ನಾಪತ್ತೆಯಾಗಿದ್ದರೂ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಮೀನುಗಾರಿಕಾ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ಸತೀಶ್ ಕುಂದರ್ ಮತ್ತು ಮಲ್ಪೆ ಡೀಪ್ ಸೀ ಟ್ರಾಲ್ ಬೋಟ್ ಅಸೋಸಿಯೇಶನಿನ ಅಧ್ಯಕ್ಷ ಕಿಶೋರ್ ಡಿ. ಸುವರ್ಣ ಮಾತನಾಡಿ, ಮೀನುಗಾರರು ನಾಪತ್ತೆಯಾಗಿ 19 ದಿನ ಕಳೆದಿವೆ. ಮೀನುಗಾರಿಕೆ ಸಚಿವ ರಾಗಲಿ, ಉಸ್ತುವಾರಿ ಸಚಿವರಾಗಲಿ ಸಭೆಕರೆದು ಚರ್ಚೆ ಕೂಡ ನಡೆಸಿಲ್ಲ. ಮೀನುಗಾರರೆಲ್ಲರೂ ಒಗ್ಗಟ್ಟಿನಿಂದ ಸರಕಾರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ; ಇದಕ್ಕಾಗಿ ಜೈಲ್ ಭರೋಗೂ ಸಿದ್ಧರಾಗಿ ರಬೇಕು ಎಂದರು.
ಜ. 6ರಂದು ನಡೆಯುವ ಪ್ರತಿಭಟನೆಯಲ್ಲಿ ಮೂರು ಜಿಲ್ಲೆಗಳ ಮೀನುಗಾರರು ಭಾಗವಹಿಸಿ, ಮೀನುಗಾರರ ಶಕ್ತಿ ಏನೆಂಬುವುದನ್ನು ತೋರಿಸಬೇಕು. ಆ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಬೇಕು. ಅಲ್ಲದೆ, ಇನ್ಮುಂದೆ ಸರಕಾರ ಮೀನುಗಾರರ ಸುರಕ್ಷತೆಗೆ ಹೆಚ್ಚಿನ ಕ್ರಮಕೈಗೊಳ್ಳುವಂತೆ ಮಾಡಬೇಕಾಗಿದೆ ಎಂದರು..
ಜ. 6ರಂದು ಬೆಳಗ್ಗೆ 10ಕ್ಕೆ ಉಡುಪಿಯ ಕರಾವಳಿ ಬೈಪಾಸ್‌ನಲ್ಲಿ ನಡೆಯುವ ರಾ.ಹೆ. ತಡೆಯಲ್ಲಿ ಉಪ್ಪಳದಿಂದ ಕಾರವಾರದವರೆಗೆ ಮೂರು ಜಿಲ್ಲೆಯಿಂದ ಸುಮಾರು 30 ಸಾವಿರಕ್ಕೂ ಮಿಕ್ಕಿ ಮೀನುಗಾರರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 8.30ಕ್ಕೆ ಮಲ್ಪೆ ಮೀನುಗಾರಿಕೆ ಬಂದರಿನಿಂದ ಬೈಪಾಸ್‌ವರೆಗೆ ಪಾದಯಾತ್ರೆ ನಡೆಯಲಿದೆ.
ಸತೀಶ್ ಕುಂದರ್, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…