ಮಲ್ಪೆ: ನಾಗರಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಧಾಕರ ಅಮೀನ್ (55) ಅವರಿಗೆ ಜೂ. 8ರಂದು ತಮ್ಮ ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇಟ್ಟಿದ್ದ ಅಂಗಿಯನ್ನು ತೆಗೆಯಲು ಹೋದಾಗ ಕಪಾಟಿನ ಮೇಲೆ ಇದ್ದ ನಾಗರಹಾವು ಕಚ್ಚಿದೆ.
ಕೂಡಲೇ ಸುಧಾಕರ ಅಮೀನ್ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜೂ. 13ರಂದು ಮಧ್ಯಾಹ್ನದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…