Featured

ಮಲ್ಪೆ : ಮಹಿಳೆಗೆ ಹಲ್ಲೆ ಘಟನೆ ದುರದೃಷ್ಟಕರ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಮಲ್ಪೆ : ಮಹಿಳೆಗೆ ಹಲ್ಲೆ ಘಟನೆ ದುರದೃಷ್ಟಕರ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ತೀರ ದುರದೃಷ್ಟಕರವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಮೀನುಗಾರಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೀನುಗಾರಿಕೆ ಇಲಾಖೆಯ ನಿರ್ಲಕ್ಷ್ಯ : ದೇಶದ ಅತೀ ದೊಡ್ಡ ಸರ್ವಋತು ಮೀನುಗಾರಿಕೆ ಮಲ್ಪೆ ಬಂದರಿನ ನಿರ್ವಹಣೆಯ ಬಗ್ಗೆ ಇಲಾಖೆಯ ದಿವ್ಯ ನಿರ್ಲಕ್ಷ್ಯ ಇಂತಹ ಘಟನೆಗೆ ಅವಕಾಶ ನೀಡಿದೆ. ಬಂದರಿನಲ್ಲಿ ನಿರಂತರವಾಗಿ ಕಳ್ಳತನ ಘಟನೆಗಳು ವರದಿಯಾಗುತ್ತಿದ್ದರೂ ಸೂಕ್ತ ಸಿಸಿಟಿವಿ ಅಳವಡಿಕೆ, ಹಾಗೂ ಭದ್ರತಾ ಸಿಬ್ಬಂದಿಗಳನ್ನು ನೇಮಿಸಿಲ್ಲ. ಈ ಬಗ್ಗೆ ಮೀನುಗಾರಿಕೆ ಮತ್ತು ಬಂದರು ಇಲಾಖೆ ಹಾಗೂ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳೊಂದಿಗೆ 3 ಬಾರಿ ಸಭೆ ನಡೆಸಿ ಸೂಚನೆ ನೀಡಿದ್ದು, ಬಂದರು ನಿರ್ವಹಣೆಯ ಗುತ್ತಿಗೆ ಅವಧಿ ಮುಗಿದು ಒಂದು ವರ್ಷ ಮೀರಿದ್ದರೂ ಟೆಂಡರ್ ನಿಯಮಗಳನ್ನು ಪಾಲಿಸದೆ ನಿರ್ವಹಣೆಯಲ್ಲಿ ಲೋಪ ಎಸಗಿದ ಬಗ್ಗೆ ದೂರುಗಳಿದ್ದರೂ ಅದೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಟೆಂಡರ್ ಮುಂದುವರೆಸಿದ್ದಾರೆ.

ಈವರೆಗೂ ಹೊಸ ಟೆಂಡರ್ ಕರೆಯದೇ ಇರುವ ಬಗ್ಗೆ ಕಳೆದ ಶನಿವಾರ ಕೂಡ ಸಭೆ ನಡೆಸಿ ಸೂಚನೆ ನೀಡಲಾಗಿತ್ತು. ಈ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಿದ್ದರೂ ಕ್ರಮ ಕೈಗೊಳ್ಳದೇ ಮೀನುಗಾರರು ಸಮಸ್ಯೆ ಎದುರಿಸುವಂತಾಗಿದೆ. ಜಿಲ್ಲಾಡಳಿತ ತಕ್ಷಣ ಈ ಗಂಭೀರ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಸಾವಿರಾರು ಮಂದಿಗೆ ಅನ್ನದ ಬಟ್ಟಲಾಗಿರುವ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಎಲ್ಲರೂ ಸೌಹಾರ್ದ ರೀತಿಯಲ್ಲಿ ಮೀನುಗಾರಿಕೆ ಚಟುವಟಿಕೆಯಲ್ಲಿ ಹಲವು ದಶಕಗಳಿಂದ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಹಲವು ಬಾರಿ ಸಣ್ಣ ಪುಟ್ಟ ಘಟನೆಗಳು ನಡೆದಾಗ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಸೌಹಾರ್ದ ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆದಿದೆ. ಬಡವ ಶ್ರೀಮಂತ ಭೇದವಿಲ್ಲದೆ ಉಡುಪಿ ಮಾತ್ರವಲ್ಲದೇ ಹೊರ ರಾಜ್ಯ, ಹೊರ ಜಿಲ್ಲೆಯ ಸಾವಿರಾರು ಮಂದಿ ಮಲ್ಪೆ ಬಂದರಿನಲ್ಲಿ ದುಡಿಯುತ್ತಿದ್ದು ಈವರೆಗೂ ಎಂದಿಗೂ ಮೇಲು ಕೀಳೆಂಬ ತಾರತಮ್ಯಕ್ಕೆ ಮಲ್ಪೆ ಬಂದರಿನಲ್ಲಿ ಎಂದಿಗೂ ಅವಕಾಶ ನೀಡಿಲ್ಲ. ಕಾರ್ಮಿಕರ ಬಗ್ಗೆ ಮಲ್ಪೆ ಮೀನುಗಾರರ ಸಂಘ ವಿಶೇಷ ಕಾಳಜಿ ವಹಿಸುತ್ತಿದ್ದು ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಹೊರ ಜಿಲ್ಲೆಯ ಕಾರ್ಮಿಕರಿಗೆ ಬಂದರಿನಲ್ಲಿ ಊಟ ಹಾಗೂ ತಮ್ಮ ಊರುಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿರುವ ಉದಾಹರಣೆ ಇದೆ.

ಇತ್ತೀಚಿನ ದಿನಗಳಲ್ಲಿ ತೀವ್ರ ಮತ್ಸ್ಯಕ್ಷಾಮದಿಂದ ಮೀನುಗಾರರು ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಆಕಸ್ಮಿಕ ಘಟನೆ ನಡೆದಿದ್ದು, ಈಗಾಗಲೇ ಪೊಲೀಸ್ ಇಲಾಖೆ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಧಿವೇಶನದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿರುವ ಕಾರಣ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ, ಮಲ್ಪೆ ಮೀನುಗಾರ ಸಂಘದ ಜೊತೆಯಾಗಿ ಸೂಕ್ತ ಕ್ರಮವಹಿಸುವುದಾಗಿ ಶಾಸಕ ಯಶ್‌ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago