ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆ ಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇಂತಹ ಅನಾಗರೀಕ ವರ್ತನೆ ಸಹಿಸಲಾಗದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿ ದ್ದಾರೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…