ಉಡುಪಿ : ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.
ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ಬೋಟಿನ ಸುತ್ತ ಸುಮಾರು 25ರಿಂದ 30 ಬೋಟುಗಳು ನಿಂತಿದ್ದರೂ, ಸಮುದ್ರದ ನೀರಿನ ಉಬ್ಬರ ಇತರ ಯಾವುದೇ ಬೋಟಿಗೆ ಬೆಂಕಿ ತಗಲದಿರಲು ಕಾರಣವಾಯಿತೆನ್ನಲಾಗಿದೆ. ಬೆಂಕಿಗಾಹುತಿಯಾದ ಬೋಟಿನಲ್ಲಿ ಬಲೆ, 200 ಲೀ. ಡಿಸೇಲ್, ಜಿಪಿಎಸ್, ಫಿಶ್ ಫೈಂಡರ್, ಲೈಫ್ ಜಾಕೆಟ್, ವಾಟರ್ ಟ್ಯಾಂಕರ್, ಬಾಕ್ಸ್ ಇದ್ದು, ಸುಮಾರು 15 ಲಕ್ಷ ರೂ.ಗಳಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…