ಮಲ್ಪೆ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟೊಂದು ಮುಳುಗಡೆಗೊಂಡಿದ್ದು ,ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿದ್ದಾರೆ.
ಕಡೆಕಾರು ರಕ್ಷಾ ಅವರಿಗೆ ಬೋಟು ಮಲ್ಪೆ ಬಂದರಿನಿಂದ ತೆರಳಿತ್ತು. ಡಿಸೆಂಬರ್ 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್ ಕ್ಷಣ ಬೋಟಿನ ತಂಡೇಲ ವಯರ್ ಲೆಸ್ ಮೂಲಕ ಇತರ ಬೋಟ್ಗಳಿಗೆ ಸಂದೇಶ ನೀಡಿದರು.
ಶ್ರೀ ಮೂಕಾಂಬಿಕಾ ಅನುಗ್ರಹ ಬೋಟಿನವನರು ಧಾವಿಸಿ ಬಂದು ಮುಳುಗುತ್ತಿರುವ ಬೋಟನ್ನು ಮೇಲೆಳೆಯಲು ಯತ್ನಿಸಿದರು. ನೀರಿನ ಅಬ್ಬರ ಜಾಸ್ತಿಯಾಗಿದ್ದರಿಂದ ಪ್ರಯತ್ನ ಫಲ ನೀಡಲಿಲ್ಲ. ಸುಮಾರು 8 ಗಂಟೆ ವೇಳೆಗೆ ಬೋಟ್ ಪೂರ್ಣ ಮುಳುಗಡೆಗೊಂಡಿತು. ಅದರಲ್ಲಿದ್ದ ಮೀನುಗಾರರನ್ನು ಮೂಕಾಂಬಿಕಾ ಬೋಟಿನವರು ದಡಕ್ಕೆ ಸೇರಿಸಿದ್ದಾರೆ.ಘಟನೆಯಿಂದ ಸುಮಾರು 18 ಲ.ರೂ. ನಷ್ಟ ಅಂದಾಜಿಸಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…