ಮಲ್ಪೆ: ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ಅನುಮತಿಯಿಲ್ಲದೆ ತಡರಾತ್ರಿವರೆಗೆ ಡಿಜೆ ಧ್ವನಿವರ್ಧಕ ಬಳಸಿದ ಕಾರಣ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ. 18ರಂದು ಎಎಸ್‌ಐ ವಿಜಯ್ ಕೆ. ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ರಾತ್ರಿ 11 ಗಂಟೆ ವೇಳೆಗೆ ಉಡುಪಿ ಕಂಟ್ರೋಲ್ ರೂಂನಿಂದ ಮಾಹಿತಿ ಬಂದಂತೆ ಕೊಡವೂರಿನಲ್ಲಿ ಮೆಹಂದಿ ಕಾರ್ಯಕ್ರಮ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿತ್ತು.
ಅಲ್ಲಿ ಡಿಜೆಗಳನ್ನು ಬಳಸಿ ರಾತ್ರಿ 11.30ರ ಸಮಯದಲ್ಲಿ ಕರ್ಕಶವಾದ ಸೌಂಡ್ ಹಾಕಲಾಗಿದ್ದು, ಇದಕ್ಕೆ ಯಾವುದೇ ಪೂರ್ವಾನುಮತಿ ಮತ್ತು ಪರವಾನಿಗೆಯನ್ನು ಪಡೆದಿರಲಿಲ್ಲ ಹಾಗೂ ತಡರಾತ್ರಿವರೆಗೆ ಧ್ವನಿವರ್ಧಕವನ್ನು ಕರ್ಕಶವಾಗಿ ಸಾರ್ವಜನಿಕರಿಗೆ ಉಪದ್ರವಾಗುವ ರೀತಿಯಲ್ಲಿ ಬಳಸಿದ್ದರಿಂದ ಧ್ವನಿವರ್ಧಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸೌಂಡ್ ಸಿಸ್ಟಂ ಮಾಲಕ ಮತ್ತು ಖಾಸಗಿ ರೆಸಾರ್ಟ್‌ನ ಮಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…