ಮಲ್ಪೆ: ರಸ್ತೆ ಬದಿಯಲ್ಲಿ ಬೆಳೆದ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ಸಂಭವಿಸಿದೆ.
ಗದಗ ಮೂಲದ ಅಣ್ಣಪ್ಪ (45), ಸುಜಾತಾ (25) ಮತ್ತು ಸಂಗೀತಾ (7) ಅಸ್ವಸ್ಥರಾದವರು.
ಅವರು ಮಲ್ಪೆ ಸಮೀಪದ ತೊಟ್ಟಂನಲ್ಲಿ ದಿನಗೂಲಿ ಕೆಲಸ ಮಾಡಿಕೊಂಡಿದ್ದು ಕೆಲಸ ಮುಗಿಸಿ ಮನೆಗೆ ತೆರಳುವಾಗ ರಸ್ತೆ ಬದಿಯಲ್ಲಿ ಬೆಳೆದಿದ್ದ ಅಣಬೆಯನ್ನು ತೆಗೆದುಕೊಂಡು ಹೋಗಿ ಮನೆಯಲ್ಲಿ ಹಸಿಯಾಗಿಯೇ ಹಂಚಿಕೊಂಡು ತಿಂದಿದ್ದಾರೆ. ಬಳಿಕ ಮೂವರೂ ತೀವ್ರ ಅಸ್ವಸ್ಥಗೊಂಡ ಕಾರಣ ಮನೆಯ ಇತರರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತಂದರು.
ವಿಷಯ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ತಂಡ ತತ್‌ಕ್ಷಣ ಸ್ಥಳಕ್ಕೆ ತೆರಳಿ ಆ್ಯಂಬುಲೆನ್ಸ್ ಮೂಲಕ ಮೂವರನ್ನೂ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…