Featured

ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ – vishwanews24

ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ

ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಳಾರ್ಕಳಬೆಟ್ಟು ಗ್ರಾಮದ ನೇಜಾರಿನ ಓಡ್ರಿನ್‌ ಡಿ’ಸೋಜಾ ಅವರು ಕಲ್ಯಾಣಪುರ ತೋನ್ಸೆಯ ರಾಯ್ಸನ್‌ ಅಂಟೋನಿ ಬರೆಟ್ಟೋ ಅವರಲ್ಲಿ ಯು.ಕೆ. ಮತ್ತು ಕೆನಡಾ ದೇಶದಲ್ಲಿ ಹಲವು ಉದ್ಯೋಗಗಳಿವೆ. ಅದಕ್ಕೆ 5 ಲ.ರೂ. ಖರ್ಚಾಗುತ್ತದೆ. 2 ಕಂತುಗಳಲ್ಲಿ ಪಾವತಿಸುವಂತೆ ತಿಳಿಸಿದ್ದರು. ಮೊದಲು 2.50 ಲ.ರೂ. ಅನ್ನು ಬಹ್ರೈನ್‌ನಲ್ಲಿರುವ ರಾಜು ಕೈತ ಅಂಧ್ರಪ್ರದೇಶ ಅವರ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಅದಕ್ಕೆ ಒಪ್ಪಿಕೊಂಡ ರಾಯ್ಸನ್‌ ಅಂಟೋನಿ ಅವರು ಹಣವನ್ನು ವರ್ಗಾವಣೆ ಮಾಡಿದ್ದರು.

ಇದಾಗಿ ಮೂರು ತಿಂಗಳು ಕಳೆದರೂ ಯಾವುದೇ ವೀಸಾ ಸಿಗಲಿಲ್ಲ. ಈ ಬಗ್ಗೆ ರಾಜು ಕೈತ ಅವರಿಗೆ ಕರೆ ಮಾಡಿ ಸಂಪರ್ಕಿಸಿದಾಗ ಬಾಕಿ ಉಳಿದ ಎರಡೂವರೆ ಲಕ್ಷ ರೂಪಾಯಿ ನೀಡುವಂತೆ ತಿಳಿಸಿದ‌ರು. ಅದರಂತೆ ರಾಯ್ಸನ್‌ ಅಂಟೋನಿ ಬರೆಟ್ಟೋ ಅವರು ಆದೇ ಖಾತೆಗೆ ಉಳಿದ ಹಣವನ್ನು ವರ್ಗಾಯಿಸಿದ್ದರು. ಆನಂತರ ಕೆಲವು ದಿನಗಳು ಕಳೆದರೂ ವೀಸಾ ಮಾತ್ರ ಸಿಗಲಿಲ್ಲ. ಅನುಮಾನಗೊಂಡ ಈ ಬಗ್ಗೆ ಹಣ ವಾಪಸು ಕೇಳಿದ್ದಕ್ಕೆ ಬೆದರಿಕೆಯನ್ನು ಹಾಕಿದ್ದಾರೆ ಎಂದು ರಾಯ್ಸನ್‌ ಅಂಟೋನಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago