ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ.
ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವಪತ್ತೆಯಾಗಿತ್ತು ಮಸೀದಿಯವರು ಪ್ರಕರಣ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ” ಎಂದರು. ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ.
ಸ್ಥಳೀಯ ಯುವತಿ ಆಫ್ರಿನಾ ಅವರ ನವಜಾತ ಮಗುವಿನ ಶವ ಎಂದು ಗೊತ್ತಾಗಿದೆ. ಆಫ್ರಿನಾಳಿಂದ ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ. ಆಕೆ ತನ್ನದೇ ಮಗು ಎಂದು ಒಪ್ಪಿಕೊಂಡಿದ್ದಾಳೆ. ಏಳುವರೆ ಯಿಂದ ಎಂಟು ತಿಂಗಳು ನಡುವಯಸ್ಸಿನ ಭ್ರೂಣವಾಗಿದ್ದು ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದರು. ಏಕಾಏಕಿ ಹೊಟ್ಟೆ ನೋವು ಬಂದಿರುವುದರಿಂದ ಶೌಚಾಲಯಕ್ಕೆ ತೆರಳಿದ್ದಾಳೆ. ಶೌಚಾಲಯದಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾಳೆ.
ಸದ್ಯ ಆಫ್ರಿನಾ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು.ಈ ಬಗ್ಗೆ ಕೆಲವೊಂದು ಅನುಮಾನಾಸ್ಪದ ಆಡಿಯೋಗಳು ವೈರಲ್ ಆಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…