Featured

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ ; ಸ್ಪಷ್ಟನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ – vishwanews24

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ ; ಸ್ಪಷ್ಟನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ.

ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವಪತ್ತೆಯಾಗಿತ್ತು‌ ಮಸೀದಿಯವರು ಪ್ರಕರಣ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ” ಎಂದರು. ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ.

ಸ್ಥಳೀಯ ಯುವತಿ ಆಫ್ರಿನಾ ಅವರ ನವಜಾತ ಮಗುವಿನ ಶವ ಎಂದು ಗೊತ್ತಾಗಿದೆ. ಆಫ್ರಿನಾಳಿಂದ ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ. ಆಕೆ ತನ್ನದೇ ಮಗು ಎಂದು ಒಪ್ಪಿಕೊಂಡಿದ್ದಾಳೆ. ಏಳುವರೆ ಯಿಂದ ಎಂಟು ತಿಂಗಳು ನಡುವಯಸ್ಸಿನ ಭ್ರೂಣವಾಗಿದ್ದು ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದರು. ಏಕಾಏಕಿ ಹೊಟ್ಟೆ ನೋವು ಬಂದಿರುವುದರಿಂದ ಶೌಚಾಲಯಕ್ಕೆ ತೆರಳಿದ್ದಾಳೆ. ಶೌಚಾಲಯದಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾಳೆ.

ಸದ್ಯ ಆಫ್ರಿನಾ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು.‌ಈ ಬಗ್ಗೆ ಕೆಲವೊಂದು ಅನುಮಾನಾಸ್ಪದ ಆಡಿಯೋಗಳು ವೈರಲ್ ಆಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 hour ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago