ಮಲ್ಪೆ : ಮಳೆ- ಗಾಳಿಯಿಂದಾಗಿಸಮುದ್ರ ಪ್ರಕ್ಷುಬ್ಧ ಗೊಂಡು 7-8 ದಿನಗಳಿಂದ ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭಗೊಂಡಿದೆ. ಸಮುದ್ರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಯಾಂತ್ರಿಕ ಬೋಟುಗಳು ಕಡಲಿಗಿಳಿಯಲಾರಂಭಿಸಿವೆ.
ಬುಧವಾರ ಮಲ್ಪೆ ಬಂದರಿನಿಂದ ಸುಮಾರು ಶೇ. 40ರಷ್ಟು ಆಳಸಮುದ್ರ ಬೋಟುಗಳು ಕಡಲಿಗಿಳಿದಿವೆ. ಬಹುತೇಕ ಪಸೀìನ್ ಬೋಟುಗಳು ಬೆಳಗ್ಗೆಯೇ ಮೀನುಗಾರಿಕೆಗೆ ತೆರಳಿದ್ದವು. ಇನ್ನು ಕೆಲವು ಬೋಟುಗಳು ಕಡಲಿಗಿಳಿಯಲು ಸಿದ್ಧತೆ ನಡೆಸುತ್ತಿವೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮೀನುಗಾರಿಕೆ ಋತು ಆರಂಭಗೊಂಡ ಒಂದು ತಿಂಗಳು ಕಳೆದು ಕೊಂಚ ಆದಾಯ ಗಳಿಸುವಷ್ಟರಲ್ಲೇ ಪ್ರತಿಕೂಲ ಹವಾಮಾನ ಸಂಭವಿಸಿದ್ದು ಮೀನು ಗಾರಿಕೆಯನ್ನು ನಡೆಸದಂತಾಗಿತ್ತು. 8 ದಿನಗಳಲ್ಲಿ ನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರಕ್ಕೆ ಹೊಡೆತ ಉಂಟಾಗಿತ್ತು. ಇದೀಗ ಮೀನುಗಾರಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಮೀನುಗಾರರು ಕಡಲಿಗಿಳಿಯಲು ಸಜ್ಜಾಗಿದ್ದಾರೆ. ಗುರುವಾರ ದಿಂದ ಉಳಿದ ಬೋಟ್‌ಗಳು ತೆರಳುವ ಸಾಧ್ಯತೆ ಇದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…