ಉಡುಪಿ : ಸಮುದ್ರದಲ್ಲಿ ಸೈಕ್ಲೋನ್ ನಿಂದಾಗಿ ಉಂಟಾಗಿರುವ ಅಲೆಗಳ ಅಬ್ಬರದಿಂದಾಗಿ ಮುಂಜಾಗೃತಾ ಕ್ರಮವಾಗಿ ಮಲ್ಪೆ ಬೀಚ್‍ನಲ್ಲಿ ನೂತನವಾಗಿ ಆರಂಭಗೊಂಡಿರುವ ತೇಲುವ ಸೇತುವೆ ಸೇರಿದಂತೆ ಜಲ ಕ್ರೀಡೆಗಳನ್ನು ಮೂರು ದಿನಗಳ ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ನಿರ್ವಹಣಾ ಸಮಿತಿ ಉಸ್ತುವಾರಿ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಮಲ್ಪೆ ಬೀಚ್ ನಲ್ಲಿ ಇತ್ತೀಚೆಗೆ ಅರಂಭಗೊಂಡಿರುವ ತೇಲುವ ಸೇತುವ (ಫ್ಲೋಟಿಂಗ್ ಬ್ರಿಡ್ಜ್) ನ ಕುರಿತಾಗಿ ಹಬ್ಬಿರು ವದಂತಿಗಳಿಗೆ ಸ್ಪಷ್ಟನೆ ನೀಡಿ ಪ್ರತಿಕ್ರಿಯೆ ನೀಡಿದ ಅವರು, ಈ ಸೇತುವೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸೆಂಟರ್ ಲಾಕ್ ವ್ಯವಸ್ಥೆಯನ್ನು ತೆಗೆದಿಡಲಾಗಿದೆ. ಇದರಿಂದಾಗಿ ಸೇತುವೆಯ ಕೆಲವು ಬ್ಲಾಕ್‍ಗಳು ಸಮುದ್ರದಲ್ಲಿ ತೇಲುತ್ತಿದ್ದವು. ಆದರೆ ಜನರು ಇದನ್ನು ತಪ್ಪಾಗಿ ಗ್ರಹಿಸಿಕೊಂಡು ವಂದತಿಗಳನ್ನು ಹಬ್ಬಿಸುತ್ತಿದ್ದಾರೆ. ಸೇತುವೆ ತುಂಡಾಗಿದೆ, ಸುರಕ್ಷಿತವಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಸೇತುವೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು ಯಾವುದೇ ತೊಂದರೆಗಳು ಆಗಿಲ್ಲ. ತೇಲುವ ಸೇತುವೆಗೂ ಯಾವುದೇ ಹಾನಿಯಾಗಿಲ್ಲ. ಅಲ್ಲದೆ ತೇಲುವ ಸೇತುವೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಪ್ರವಾಸಿಗರು ಹಾಗೂ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು ಎಂದು ತಿಳಿಸಿದರು.
ಇನ್ನು ಸೈಕ್ಲೋನ್ ಪ್ರಭಾವದಿಂದಾಗಿ ಸದ್ಯ ಮಲ್ಪೆ ಬೀಚ್ ನಲ್ಲಿ ತೇಲುವೆ ಸೇತುವೆ ಜೊತೆಗೆ ಇತರ ಜಲ ಕ್ರೀಡೆ ಹಾಗೂ ದ್ವೀಪ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು ಸೈಕ್ಲೋನ್ ಪ್ರಭಾವ ಕಡಿಮೆ ಆದ ಬಳಿಕ ಮತ್ತೆ ಆರಂಭಿಸಲಾಗುವುದು ಎಂದು ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…