Featured

ಮಲ್ಪೆ ಹಲ್ಲೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ನೀಡಿರುವ  ಪ್ರಮೋದ್ ಮಧ್ವರಾಜರನ್ನು ಕೂಡಲೇ ಬಂಧಿಸಿ : ಗಿರೀಶ್ ಡಿ ಆರ್ – vishwanews24

ಮಲ್ಪೆ ಹಲ್ಲೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ನೀಡಿರುವ  ಪ್ರಮೋದ್ ಮಧ್ವರಾಜರನ್ನು ಕೂಡಲೇ ಬಂಧಿಸಿ : ಗಿರೀಶ್ ಡಿ ಆರ್

ಉಡುಪಿ: ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ಆರೋಪದಡಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ಚರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಅವರನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಆಗ್ರಹಿಸಿದೆ.

ಉಡುಪಿ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್, “ಕೃತ್ಯವನ್ನು ಸಮರ್ಥಿಸು ಮಹಿಳೆಯನ್ನು ನಿಂದಿಸುವ ಪ್ರಚೋದನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ, ಅವರನ್ನು ಕೂಡಲೇ ಸರಕಾರ ಬಂಧಿಸಬೇಕೆಂದು ಆಗ್ರಹಿಸಿದರು.

ಪ್ರಕರಣದ ಸತ್ಯಾಸತ್ಯತೆಯ ವಿಡಿಯೋ ರಾಜ್ಯದಲ್ಲೆಡೆ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಉಡುಪಿಯ ಮಾಜಿ ಶಾಸಕರಾದ ರಘುಪತಿ ಭಟ್ ಅವರು ಕೃತ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿ ‘ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ನಿಂದನೆ ಕೇಸ್ ಅನ್ವಯವಾಗುವುದಿಲ್ಲ ಎಂದು ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದು, ಅವರ ಹೇಳಿಕೆ ಕಾನೂನು ವಿರೋಧಿಯಾಗಿದ್ದು, ಕೂಡಲೇ ಬೇಷರತ್‌ ಕ್ಷಮೆಯಾಚಿಸಬೇಕು ಎಂದು ಹೇಳಿದರು.

ಸಾರ್ವಜನಿಕವಾಗಿ ಥಳಿತ, ನಿಂದನೆ ಹಾಗು ಅಪಮಾನಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ‘ಪರಿಶಿಷ್ಟ ಜಾತಿ ಹಾಗೂ ಪಂಗಡ ದೌರ್ಜನ್ಯ ತಡೆ ಕಾಯ್ದೆ 1989” ಅಡಿ ನೀಡಲಾಗುವ ಪರಿಹಾರವನ್ನು ಕೂಡಲೇ ಒದಗಿಸಬೇಕು.ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ವಿರುದ್ಧವಾಗಿ ರಾಜಕೀಯ ಪ್ರೇರಿತವಾಗಿ ಮನಸೋ ಇಚ್ಛೆ ಹೇಳಿಕೆ ನೀಡುವರ ವಿರುದ್ಧ ಪೋಲಿಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಬೇಕು.

ಪ್ರಕರಣದ ತೀವ್ರತೆಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಕೃತ್ಯ ನಡೆದ ಸ್ಥಳದಲ್ಲಿ ಕೂಡಲೇ “ಶಾಂತಿ ಸಭೆ” ಆಯೋಜಿಸಿ ಎಲ್ಲರ ಮಧ್ಯೆ ಸೌಹಾರ್ದತೆಯನ್ನು ತರುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು.ನಾಗರೀಕ ಸಮುದಾಯ ತಲೆತಗ್ಗಿಸುವನಂತಹ ಅಮಾನವೀಯ ಕೃತ್ಯಗಳು ಜರುಗದಂತೆ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಹಾಗೂ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಹೊರ ಊರಿನ ಪರಿಶಿಷ್ಟರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago