Featured

ಮಲ್ಲಾರುಗುತ್ತು ಕಾಪು ಸಿ.ಎ‌ ಬ್ಯಾಂಕ್ ಮಾಜಿ‌ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ ದೈವಾಧೀನ.-vishwanews24

 

ಕಾಪು, ಜ. ೩೦ : ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ, ಮಾಜಿ ಶಾಸಕ ದಿ| ಭಾಸ್ಕರ್ ಶೆಟ್ಟಿ ಅವರ ಪುತ್ರ ಧಾರ್ಮಿಕ, ಸಹಕಾರ, ಸಾಮಾಜಿಕ ಮತ್ತು ಜಾನಪದ ಕ್ಷೇತ್ರದ ಮುಖಂಡ ಮಲ್ಲಾರುಗುತ್ತು ಸುಬ್ರಹ್ಮಣ್ಯ ಶೆಟ್ಟಿ (೬೮) ಅವರು ಜ. ೩೦ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರ ಅಂತಿಮ ಕ್ರಿಯೆಯು ಜ. 30 ರಂದು ರಾತ್ರಿ 9.30 ಕ್ಕೆ ಮಲ್ಲಾರುಗುತ್ತುವಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ಪತ್ನಿ ಕಾಪು ಪುರಸಭೆಯ ಸದಸ್ಯೆ ಶಾಂತಲತಾ ಎಸ್. ಶೆಟ್ಟಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಾಪು ಸಾವಿರ ಸೀಮೆಯ ಒಂದನೇ ಗುತ್ತು ಮನೆತನದ ಗುತ್ತಿನಾರ್ ಆಗಿದ್ದ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾಗಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಟ್ರಸ್ಟಿಯಾಗಿ, ಮಲ್ಲಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ, ಕಾಪು ಸಿ.ಎ. ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಕಾಪು ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ ಪೋಷಕರಾಗಿದ್ದ ಅವರು ಮಲ್ಲಾರು ಶ್ರೀ ಬ್ರಹ್ಮ ಬೆದರ್ಕಳ ಗರೊಡಿ, ಧೂಮಾವತಿ ದೈವಸ್ಥಾನದ ಗುತ್ತಿನಾರ್ ಆಗಿಯೂ ಸೇವೆ ಸಲ್ಲಿಸುತ್ತಿದ್ದರು. ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ, ಭೂತ ಕೋಲ ಸಹಿತ ವಿವಿಧ ಆರಾಧನಾ ಸೇವೆಗಳಲ್ಲಿ ಮುಂಚೂಣಿಯ ಸೇವಾಸಕ್ತರಾಗಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago