ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಬೇಸಿಗೆಯಂತಹ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಎಲ್ ನಿನೋ ಎಫೆಕ್ಸ್‌ನಿಂದ ಮಳೆ ಅಭಾವ ಉಂಟಾಗಿದ್ದು, ಇತ್ತ ತಾಪಮಾನ ಏರಿಕೆಯಾಗುತ್ತಿದೆ. ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನೂ ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 4 ರಿಂದ 5 ಡಿಗ್ರಿ ತಾಪಮಾನ ಏರಿಕೆಯಾಗಲಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ದಾಖಲಾಗುವಂತಹ ಬಿಸಿಲು ಇದೀಗ ಮುಂಗಾರು ಸಮಯದಲ್ಲಿ ದಾಖಲಾಗಲಿದೆ.
ಮುಂದಿನ ಒಂದು ವಾರ ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಲಿದೆ. ಜೊತೆಗೆ ಕಲಬುರಗಿಯಲ್ಲಿ 36 ರಿಂದ 37ವರೆಗೆ ಏರಿಕೆ ಆಗಲಿದೆ. ಮಳೆ, ಮೋಡ ಹಾಗೂ ಭೂಮಿಯ ತೇವಾಂಶ ಕಡಿಮೆಯಾದ ಹಿನ್ನೆಲೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ…
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…
ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ…
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್…
ಮಲ್ಪೆ: ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು…
ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…